ಕೊಡಗು:ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವೊಂದು ಆಯತಪ್ಪಿ ಬಹು ಮಹಡಿ ಕಟ್ಟಡದ ಮೇಲಿಂದ ಕೆಳಗೆ ಬಿದ್ದ ಪರಿಣಾಮ ಮೃತಪಟ್ಟಿರುವ ಘಟನೆ ವಿರಾಜಪೇಟೆ ಪಟ್ಟಣದ ಹೆಚ್.ಎಂ. ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.
ಮಗು ಕೆಳಗೆ ಬೀಳುತ್ತಿದ್ದಂತೆ ತಲೆ ಭಾಗಕ್ಕೆ ಗಂಭೀರ ಪೆಟ್ಟಾದ ಕಾರಣ ಸ್ಥಳದಲ್ಲೇ ಸಾವನ್ನಪ್ಪಿದೆ.

ಅಂಜುಮಾಮ್ ಮತ್ತು ಜಾಯಿದಾಬಾನು ದಂಪತಿಯ ಮಗು ಪ್ರಾಣ ಕಳೆದುಕೊಂಡ ದುರ್ದೈವಿ.
ದಂಪತಿ ಎರಡು ತಿಂಗಳಿಂದ ಹೆಚ್.ಎಂ. ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು. ಪತಿ ದುಬೈಗೆ ತೆರಳಿದ ಹಿನ್ನೆಲೆಯಲ್ಲಿ ತಾಯಿ ಮತ್ತು ಮಗು ಇಬ್ಬರೇ ವಾಸವಿದ್ದರು ಎನ್ನಲಾಗಿದೆ. ಘಟನೆ ಸಂಬಂಧ ವಿರಾಜಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.