ಕೊಡಗು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿದ ಹಿನ್ನೆಲೆ, ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ.
ಕೊಡಗಿನಾದ್ಯಂತ ಮೋಡ ಕವಿದ ವಾತಾವರಣ: ತಲಕಾವೇರಿಯಲ್ಲಿ ಜೋರು ಮಳೆ
ಬೆಳಗ್ಗೆಯಿಂದಲೇ ಕೊಡಗಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆ ಶುರುವಾಗಿದೆ. ಈಗಾಗಲೇ ವಿರಾಜಪೇಟೆ, ಭಾಗಮಂಡಲ, ತಲಕಾವೇರಿ, ಬ್ರಹ್ಮಗಿರಿ ಹಾಗೂ ನಾಪೋಕ್ಲು ಸೇರಿದಂತೆ ವಿವಿಧೆಡೆ ಜೋರು ಮಳೆಯಾಗುತ್ತಿದೆ.
ತುಂತುರು ಮಳೆ
ಬೆಳಗ್ಗೆಯಿಂದಲೇ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆ ಶುರುವಾಗಿದೆ. ಈಗಾಗಲೇ ವಿರಾಜಪೇಟೆ, ಭಾಗಮಂಡಲ, ತಲಕಾವೇರಿ, ಬ್ರಹ್ಮಗಿರಿ ಹಾಗೂ ನಾಪೋಕ್ಲು ಸೇರಿದಂತೆ ವಿವಿಧೆಡೆ ಜೋರು ಮಳೆಯಾಗುತ್ತಿದೆ.
ಜೂನ್ 5 ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವುದರಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಜಿಲ್ಲೆಯ ಒಳನಾಡು ಪ್ರದೇಶಗಳಲ್ಲಿ ಚದುರಿದಂತೆ ಹಾಗೂ ಗಾಳಿ ಸಹಿತ 115.60 ಮಿ.ಮೀ ನಿಂದ 204.4 ಮಿ.ಮೀಟರ್ ನಷ್ಟು ಮಳೆಯಾಗುವ ಸಾಧ್ಯತೆಗಳು ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ.