ಕೊಡಗು: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲೂಕಿನ ಅಪರ್ ಶೆಟ್ಟಹಳ್ಳಿ ಬಳಿ ನಡೆದಿದೆ.
ಟ್ರ್ಯಾಕ್ಟರ್ , ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಯುವಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲೂಕಿನ ಅಪರ್ ಶೆಟ್ಟಹಳ್ಳಿ ಬಳಿ ನಡೆದಿದೆ.
ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತ : ಯುವಕ ಸಾವು
ಶನಿವಾರ ಸಂತೆ ಸಮೀಪದ ಅಪರ್ ಶಟ್ಟಹಳ್ಳಿ ನಿವಾಸಿ ಸಚಿನ್ (21) ಮೃತ ಯುವಕ. ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಟ್ರ್ಯಾಕ್ಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಈ ಸಂಬಂಧ ಶನಿವಾರ ಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.