ಕೊಡಗು:ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆ ಸಂಭವಿಸಿದ ಬಳಿಕ ಜಿಲ್ಲೆಯಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವಿನ ಜಗಳ ಬೂದಿಮುಚ್ಚಿದ ಕೆಂಡದಂತಾಗಿದೆ. ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆಯುವುದಕ್ಕೆ ಪೊಲೀಸ್ ಇಲಾಖೆ ಕುಮ್ಮಕು ನೀಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಆರೋಪಿಸಿದೆ. ಅಲ್ಲದೇ ಜಿಲ್ಲಾ ಎಸ್ಪಿ ಕಚೇರಿ ಎದುರು ಕಾಂಗ್ರೆಸ್ನ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.
ಪೊಲೀಸರ ವೈಫಲ್ಯ ಖಂಡಿಸಿ, ಅವರಿಗೆ ಧಿಕ್ಕಾರ ಕೂಗಿ ಎಸ್ಪಿ ವರ್ಗಾವಣೆ ಮಾಡುವಂತೆ ಒತ್ತಾಯ ಮಾಡಿದರು. ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮುಂದಾಗಬಹುದು ಎಂದು ಕಾಂಗ್ರೆಸ್ನವರು ಜಿಲ್ಲಾ ಎಸ್ಪಿಗೆ ಮಾಹಿತಿ ನೀಡಿದ್ರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.