ಕೊಡಗು :ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿ ಅವರನ್ನು ಅವಮಾನಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಧೋರಣೆ ಖಂಡಿಸಿ ಕಾಂಗ್ರೆಸ್ ಕಿಸಾನ್ ಘಟಕ ಹಾಗೂ ಕರ್ನಾಟಕ ಪ್ರಾಂತ್ಯ ರೈತ ಸಂಘದ ವತಿಯಿಂದ ಗಾಂಧಿ ಮೈದಾನದಲ್ಲಿ ಪ್ರತಿಭಟನೆ ನಡೆಸಲಾಯ್ತು.
ನಗರದ ಗಾಂಧಿ ಮೈದಾನದಲ್ಲಿ ಜಮಾಯಿಸಿದ ಪಕ್ಷದ ನೂರಾರು ಪ್ರತಿಭಟನಾನಿರತರು, ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರನ್ನು ಯತ್ನಾಳ್ ಅವಮಾನಿಸಿದ್ದಾರೆ. ಅವರನ್ನು ಪಾಕಿಸ್ತಾನದ ಏಜೆಂಟ್ ಅವರೊಬ್ಬ, ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದೆಲ್ಲ ಹೀಯಾಳಿಸಿದ್ದಾರೆ. ಯತ್ನಾಳ್ ಹೇಳಿಕೆ ಸಮರ್ಥಿಸಿದ ಸಚಿವ ಕೆ ಎಸ್ ಈಶ್ವರಪ್ಪಗೂ ಧಿಕ್ಕಾರ, ಡೋಂಗಿ ಸ್ವಾತಂತ್ರ್ಯ ವಿರೋಧಿಗಳಿಗೆ ಧಿಕ್ಕಾರ, ದೇಶವನ್ನು ಅವಮಾನಿಸುತ್ತಿರುವ ಬಿಜೆಪಿಗೆ ಧಿಕ್ಕಾರ ಎಂದು ಪ್ರತಿಭಟನಾಕಾರರು ಘೋಷಣೆ ಕೂಗ್ತಾ ಆಕ್ರೋಶ ವ್ಯಕ್ತಪಡಿಸಿದರು.