ಕೊಡಗು: ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಜಿಲ್ಲೆಯ ನದಿ, ತೊರೆ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಪಶ್ಚಿಮ ಘಟ್ಟಗಳ ಸಾಲು, ಬ್ರಹ್ಮಗಿರಿ ಬೆಟ್ಟದ ತಪ್ಪಲು ಪ್ರದೇಶದಲ್ಲೂ ಕೂಡ ಗಾಳಿಸಹಿತ ಭಾರಿ ಮಳೆಯಾಗುತ್ತಿದೆ.
ಬ್ರಹ್ಮಗಿರಿ ಬೆಟ್ಟಗಳ ಸಾಲಿನಲ್ಲೂ ಉತ್ತಮ ಮಳೆಯಾಗುತ್ತಿದ್ದು ಕಾವೇರಿ ನದಿ ನೀರಿನ ಮಟ್ಟ ಕೂಡ ಗಣನೀಯ ಏರಿಕೆ ಕಂಡಿದೆ. ಭಾಗಮಂಡಲ ತ್ರಿವೇಣಿ ಸಂಗಮ ಬಹುತೇಕ ಭರ್ತಿಯಾಗಿದೆ. ಗಾಳಿ ಮಳೆಯ ಜೊತೆಗೆ ಕೊಡಗಿನ ಕೆಲ ಭಾಗದಲ್ಲಿ ಭೂಕಂಪನ ಕೂಡ ಆಗುತ್ತಿರೋದ್ರಿಂದ ಜಿಲ್ಲೆಯ ಜನತೆಯಲ್ಲಿ ಮತ್ತಷ್ಟು ಆತಂಕದ ಛಾಯೆ ಮೂಡಿದೆ.