ಸೋಮವಾರಪೇಟೆ (ಕೊಡಗು): ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಸಂತೆ ನಡೆಸಬಾರದು ಎಂದು ಸ್ಥಳೀಯ ಆಡಳಿತ ಆದೇಶಿಸಿದ್ದರೂ ಅದನ್ನು ಉಲ್ಲಂಘಿಸಿ ಸೋಮವಾರಪೇಟೆ ಪಟ್ಟಣದಲ್ಲಿ ಅಂಗಡಿ ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದವರ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ.
ನಿಯಮ ಉಲ್ಲಂಘನೆ: ಸಂತೆ ವ್ಯಾಪಾರಸ್ಥರ ಮೇಲೆ ಲಾಠಿ ಬೀಸಿದ ಪೊಲೀಸರು - ಜನರ ಮೇಲೆ ಲಾಠಿ ಬೀಸಿದ ಪೊಲೀಸರು
ಸಂತೆ ಮಾಡದಂತೆ ಸ್ಥಳೀಯ ಆಡಳಿತ ಆದೇಶ ಹೊರಡಿಸಿದ್ದರೂ ಅದನ್ನು ಉಲ್ಲಂಘಿಸಿ ಅಂಗಡಿ ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿರುವ ಘಟನೆ ಸೋಮವಾರಪೇಟೆ ಪಟ್ಟಣದಲ್ಲಿ ನಡೆದಿದೆ.
ಲಾಠಿ ಬೀಸಿದ ಪೊಲೀಸರು
ಸಂತೆ ನಡೆಸದಂತೆ ಸ್ಥಳೀಯ ಆಡಳಿತ ಸೂಚಿಸಿತ್ತು. ಹೀಗಿದ್ದರೂ ಕೆಲವು ವ್ಯಾಪಾರಸ್ಥರು ಅಂಗಡಿಗಳನ್ನು ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದರು. ಈ ವೇಳೆ ಪೊಲೀಸರು ವ್ಯಾಪಾರಕ್ಕೆ ಕುಳಿತಿದ್ದವರಿಗೆ ಲಾಠಿ ಏಟು ಕೊಟ್ಟು ಜಾಗ ಖಾಲಿ ಮಾಡಿಸಿದ್ದಾರೆ. ಕೆಲವರು ಸ್ಥಳದಿಂದ ಹೋಗದ ಹಿನ್ನೆಲೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು ತರಕಾರಿಗಳನ್ನು ತುಂಬಿಕೊಂಡು ಹೋದರು.