ಕೊಡಗು: ಕೊಡಗಿನಲ್ಲಿ ಕೊರೊನಾ ಸ್ಫೋಟವಾಗಿದ್ದು, ಇಂದು 428 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಮೂರನೇ ಅಲೆಯಲ್ಲಿ ಇದೇ ಮೊದಲ ಬಾರಿಗೆ ಹೆಚ್ಚು ಕೊರೊನಾ ಪ್ರಕರಣ ವರದಿಯಾಗಿದೆ.
ಕುಶಾಲನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 33 ವಿದ್ಯಾರ್ಥಿಗಳಿಗೆ ಕೊರೊನಾ ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೊರೊನಾ ಲಕ್ಷಣ ಇರುವ ಎಲ್ಲಾ ವಿದ್ಯಾರ್ಥಿಗಳಿಗೂಕೂಡ ಟೆಸ್ಟ್ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ.