ಕರ್ನಾಟಕ

karnataka

ಕೊರೊನಾ ಎಫೆಕ್ಟ್​​​: ನೆಲಕಚ್ಚಿದ ಕೊಡಗಿನ ಪ್ರವಾಸೋದ್ಯಮ, ಸಂಕಷ್ಟದಲ್ಲಿ ಹೋಂ ಸ್ಟೇ ಮಾಲೀಕರು

ಕೊಡಗು ಜಿಲ್ಲೆಯಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಹೋಂ ಸ್ಟೇ ಮತ್ತು ರೆಸಾರ್ಟ್‍ಗಳಿದ್ದು, ಕೊರೊನಾ ಹರಡುವುದಕ್ಕೂ ಮುನ್ನ ಬುಕ್ಕಿಂಗ್ ಮಾಡಿಕೊಂಡಿದ್ದ ಪ್ರವಾಸಿಗರೆಲ್ಲ ತಮ್ಮ ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಾರೆ. ಇದರಿಂದ ಹೋಂ ಸ್ಟೇ ಮತ್ತು ರೆಸಾರ್ಟ್ ಮಾಲೀಕರು ಸಿಬ್ಬಂದಿಗೆ ಸಂಬಳ ನೀಡುವುದು ಹೇಗೆ ಎಂಬ ಆತಂಕಕ್ಕೆ ಒಳಗಾಗಿದ್ದಾರೆ.

By

Published : Mar 11, 2020, 12:36 PM IST

Published : Mar 11, 2020, 12:36 PM IST

Corona Effect on Coorg Home stay and Resorts
ಕೊಡಗಿನ ಪ್ರವಾಸೋದ್ಯಮ್ಕಕೆ ಕೊರೊನಾ ಎಫೆಕ್ಟ್​

ಕೊಡಗು: ಕೊರೊನಾ ದುಷ್ಪರಿಣಾಮ​ ಪ್ರವಾಸೋದ್ಯಮದ ಮೇಲೂ ಬಿದ್ದಿದ್ದು, ಪ್ರವಾಸಿಗರ ಕೊರತೆಯಿಂದ ಜಿಲ್ಲೆಯ ಹೋಂ ಸ್ಟೇ, ರೆಸಾರ್ಟ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಜಿಲ್ಲೆಯಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಹೋಂ ಸ್ಟೇ ಮತ್ತು ರೆಸಾರ್ಟ್‍ಗಳಿದ್ದು, ಕೊರೊನಾ ಹರಡುವುದಕ್ಕೂ ಮುನ್ನ ಬುಕ್ಕಿಂಗ್ ಮಾಡಿಕೊಂಡಿದ್ದ ಪ್ರವಾಸಿಗರೆಲ್ಲ ತಮ್ಮ ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಾರೆ. ಇದರಿಂದ ಹೋಂ ಸ್ಟೇ ಮತ್ತು ರೆಸಾರ್ಟ್ ಮಾಲೀಕರು ಸಿಬ್ಬಂದಿಗೆ ಸಂಬಳ ನೀಡುವುದು ಹೇಗೆ ಎಂಬ ಆತಂಕಕ್ಕೆ ಒಳಗಾಗಿದ್ದಾರೆ.

ಕೊಡಗಿನ ಪ್ರವಾಸೋದ್ಯಮ್ಕಕೆ ಕೊರೊನಾ ಎಫೆಕ್ಟ್​

ಮತ್ತೊಂದೆಡೆ ಜಿಲ್ಲಾಧಿಕಾರಿ ಕೂಡ ಹೋಂ ಸ್ಟೇ, ರೆಸಾರ್ಟ್ ಮತ್ತು ಪ್ರವಾಸಿ ತಾಣಗಳ ಮೇಲೆ ತೀವ್ರ ನಿಗಾ ಇಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹೊರ ದೇಶಗಳಿಂದ ಯಾರಾದರೂ ಪ್ರವಾಸಿಗರು ಬಂದರೆ ಅವರ ಬಗ್ಗೆಯೂ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದಾರೆ. ಇವೆಲ್ಲವೂ ಹೋಂ ಸ್ಟೇ ಮತ್ತು ರೆಸಾರ್ಟ್‍ಗಳ ಉದ್ಯಮದ ಮೇಲೆ ದೊಡ್ಡ ಹೊಡೆತ ನೀಡಿದೆ.

ABOUT THE AUTHOR

...view details