ಮಡಿಕೇರಿ: ಜಿಲ್ಲೆಯಲ್ಲಿನ ಕೊರೊನಾ ಆರ್ಭಟದ ನಡುವೆ ಸೋಂಕಿತ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲಾ ಕೊವೀಡ್ ಆಸ್ಪತ್ರೆಯಲ್ಲಿ ನಡೆದಿದೆ.
ಮಡಿಕೇರಿ: ಗಂಡು ಮಗುವಿಗೆ ಜನ್ಮ ನೀಡಿದ ಕೊರೊನಾ ಸೋಂಕಿತ ಮಹಿಳೆ! - ಕೊರೊನಾ ಸೋಂಕಿತ ಮಹಿಳೆಗೆ ಮಗು
ಮಡಿಕೇರಿಯಲ್ಲಿ ಕೊರೊನಾ ಆರ್ಭಟದ ನಡುವೆ ಕೊರೊನಾ ಸೋಂಕಿತ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ವೈದ್ಯರು ಸಿಜೆರಿಯನ್ ಮೂಲಕ ಯಶಸ್ವಿಯಾಗಿ ಹೆರಿಗೆ ಮಾಡಿದ್ದು, ಸದ್ಯ ತಾಯಿ ಮತ್ತು ಮಗುವಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸೋಂಕಿತ ಮಹಿಳೆ
ಕೊರೊನಾ ಪೀಡಿತ ತಾಯಿ ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದು, ವೈದ್ಯರು ಸಿಜೆರಿಯನ್ ಮೂಲಕ ಯಶಸ್ವಿಯಾಗಿ ಹೆರಿಗೆ ಮಾಡಿದ್ದಾರೆ. ಸದ್ಯ ತಾಯಿ ಮತ್ತು ಮಗುವಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊರೊನಾ ದೃಢಪಟ್ಟಿದ್ದರಿಂದ 34 ವರ್ಷದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.