ಕೊಡಗು:ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು, ಸೋಂಕಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜಿಲ್ಲಾ ಕೊವೀಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕೊಡಗಿನಲ್ಲಿ ಕೊರೊನಾಗೆ ಮತ್ತೊಂದು ಬಲಿ - Kodagu corona updates
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸೋಂಕಿತ ಮಹಿಳೆಯೋರ್ವರು ಕೊಡಗಿನಲ್ಲಿ ಮೃತಪಟ್ಟಿದ್ದಾರೆ.
Kodagu
ಮಡಿಕೇರಿಯ ಅಜಾದ್ ನಗರದ 54 ವರ್ಷದ ಮಹಿಳೆ ಮೃತಪಟ್ಟಿದ್ದು, ಮೂರು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಹಿಳೆ ಖಾಸಗಿ ಕ್ಲಿನಿಕ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ತೀವ್ರ ಉಸಿರಾಟದ ಸಮಸ್ಯೆ ಎದುರಾದ ಕಾರಣ ಮಹಿಳೆಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ.
ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲಾಗುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.