ಸೋಮವಾರಪೇಟೆ (ಕೊಡಗು): ಜಿಲ್ಲೆಯಲ್ಲಿಂದು ಕೊರೊನಾಗೆ ಮತ್ತೋರ್ವ ವೃದ್ಧ ಬಲಿಯಾಗಿದ್ದು, ಮೃತರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.
ಕೊಡಗು: ಕೊರೊನಾಗೆ ಮತ್ತೋರ್ವ ವೃದ್ಧ ಬಲಿ, ಮೃತರ ಸಂಖ್ಯೆ 32ಕ್ಕೆ ಏರಿಕೆ - Kodagu Corona UPDATE
ಸೋಮವಾರಪೇಟೆ ತಾಲೂಕಿನ ಬಸವನಹಳ್ಳಿಯ 67 ವರ್ಷದ ಕೊರೊನಾ ಸೋಂಕಿತ ವೃದ್ಧ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಅಂತ್ಯಕ್ರಿಯೆ ನಡೆಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.
ಕೊಡಗು: ಕೊರೊನಾಗೆ ಮತ್ತೋರ್ವ ವೃದ್ಧ ಬಲಿ, ಮೃತರ ಸಂಖ್ಯೆ 32ಕ್ಕೆ ಏರಿಕೆ
ಸೋಮವಾರಪೇಟೆ ತಾಲೂಕಿನ ಬಸವನಹಳ್ಳಿಯ 67 ವರ್ಷದ ವೃದ್ಧನಿಗೆ ಸೆಪ್ಟೆಂಬರ್ 18ರಂದು ಕೊರೊನಾ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾ ಜೊತೆಗೆ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಇವರಿಗೆ ತೀವ್ರ ಸುಸ್ತು ಕಾಣಿಸಿಕೊಂಡ ಹಿನ್ನೆಲೆ, ಸೆ. 22ರಂದು ಮಡಿಕೇರಿಯ ಜಿಲ್ಲಾ ಕೋವಿಡ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ವೃದ್ಧ ಮೃತಪಟ್ಟಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಅಂತ್ಯಕ್ರಿಯೆ ನಡೆಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.