ಮಡಿಕೇರಿ (ಕೊಡಗು): ಮುಂಬೈನಿಂದ ಬಂದಿದ್ದರೂ ಜಿಲ್ಲಾಡಳಿತಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪದ ಮೇರೆಗೆ ದಂಪತಿಯನ್ನು ವಶಕ್ಕೆ ಪಡೆದು ಸಾಂಸ್ಥಿಕ ಕ್ವಾರಂಟೈನ್‌ಗೆ ದಾಖಲಿಸಿರುವ ಘಟನೆ ತಾಲೂಕಿನ ಎಂ. ಬಾಗಡ ಗ್ರಾಮದಲ್ಲಿ ನಡೆದಿದೆ.
ಟ್ರಾವೆಲ್ ಹಿಸ್ಟರಿ ಮರೆಮಾಚಿದ ದಂಪತಿ ಸಾಂಸ್ಥಿಕ ಕ್ವಾರಂಟೈನ್‌ಗೆ ದಾಖಲು - madikeri
ಮುಂಬೈನಿಂದ ಕೊಡಗಿಗೆ ಬಂದಿದ್ದವರು, ಬೆಂಗಳೂರಿನಿಂದ ಬಂದಿರುವುದಾಗಿ ಪೋಲಿಸರಿಗೆ ಸುಳ್ಳು ಮಾಹಿತಿ ನೀಡಿದ್ದರು. ವಿಷಯ ತಿಳಿದ ಪೊಲೀಸರು ದಂಪತಿಯನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ದಾಖಲಿಸಿದ್ದಾರೆ.
ಮಡಿಕೇರಿ ತಾಲೂಕಿನ ಎಂ.ಬಾಡಗ ಗ್ರಾಮದ ನಿವಾಸಿಗಳಾದ ಪೊನ್ನಮ್ಮ ಹಾಗೂ ಕೆ.ಕೆ. ಬೋಪಣ್ಣ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರೂ ಮೇ 10ರಂದು ಮುಂಬೈನಿಂದ ಕೊಡಗಿಗೆ ಬಂದಿದ್ದರು. ತಾವು ಬೆಂಗಳೂರಿನಿಂದ ಬಂದಿರುವುದಾಗಿ ಪೋಲಿಸರಿಗೆ ಸುಳ್ಳು ಮಾಹಿತಿ ನೀಡಿದ್ದರು.
ಸುಳ್ಳು ಮಾಹಿತಿ ನೀಡಿ ಗ್ರಾಮಕ್ಕೆ ಬಂದಿರುವುದು ತಿಳಿದ ಕೂಡಲೆ ಗ್ರಾಮ ಪಂಚಾಯಿತಿ ಪಿಡಿಓ ಚಂದ್ರಮೌಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಕೂಡಲೇ ಪೊಲೀಸರು ದಂಪತಿಯನ್ನು ವಶಕ್ಕೆ ಪಡೆದು ಸಾಂಸ್ಥಿಕ ಕ್ವಾರಂಟೈನ್‌ಗೆ ದಾಖಲಿಸಿದ್ದಾರೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.