ಕರ್ನಾಟಕ

karnataka

ETV Bharat / state

ಕೊರೊನಾ ನಿಯಂತ್ರಣಕ್ಕೆ ಕೊಡಗು ಜಿಲ್ಲಾಡಳಿತದಿಂದ ಅಗತ್ಯ ಕ್ರಮ - ಕೊಡಗು ಕೊರೊನಾ ಮುನ್ನೆಚ್ಚರಿಕೆ ಕ್ರಮ

ಕೊಡಗು ಜಿಲ್ಲೆಯಲ್ಲಿ ಕೊರೊನಾ ತಡೆಗಟ್ಟುವ ಹಿನ್ನೆಲೆಯಲ್ಲಿ ಆಯಾಯ ತಾಲೂಕು ವ್ಯಾಪ್ತಿಯಲ್ಲಿ ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲಾಗಿದೆ. ಇಲ್ಲಿ ಸೋಂಕಿತರಿಗೆ ಅಗತ್ಯ ಔಷಧೋಪಚಾರ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಮಾಹಿತಿ ನೀಡಿದ್ದಾರೆ.

kodagu
ಕೊಡಗು ಜಿಲ್ಲಾಡಳಿತ

By

Published : May 13, 2021, 7:17 AM IST

ಕೊಡಗು: ಕೊರೊನಾ ನಿಯಂತ್ರಣ ಮಾಡಲು ಜಿಲ್ಲಾಡಳಿತ ಶ್ರಮಿಸುತ್ತಿದೆ. ಕೋವಿಡ್ ಪಾಸಿಟಿವ್ ಬಂದವರನ್ನು ಆರೈಕೆ ಮಾಡುವ ನಿಟ್ಟಿನಲ್ಲಿ ಆಯಾಯ ತಾಲೂಕು ವ್ಯಾಪ್ತಿಯಲ್ಲಿ ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲಾಗಿದ್ದು, ಸೋಂಕಿತರಿಗೆ ಅಗತ್ಯ ಔಷಧೋಪಚಾರ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 5 ಕಡೆ ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯಲಾಗಿದ್ದು, ಸದ್ಯ ಮೂರು ತಾಲೂಕುಗಳಲ್ಲಿ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಸೋಂಕಿತರನ್ನು ದಾಖಲು ಮಾಡಲಾಗುತ್ತಿದೆ.

ಮಡಿಕೇರಿ ತಾಲೂಕಿನ ನವೋದಯ ಶಾಲೆಯಲ್ಲಿ 250 ಹಾಸಿಗೆ, ಕುಶಾಲನಗರ ತಾಲೂಕಿನ ಕೂಡಿಗೆಯ ಕೋವಿಡ್ ಆರೈಕೆ ಕೇಂದ್ರದಲ್ಲಿ 80 ರಿಂದ 100 ಹಾಸಿಗೆ, ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 80 ಹಾಸಿಗೆ ಇದೆ. ಉಳಿದಂತೆ ಪೊನ್ನಂಪೇಟೆ ತಾಲೂಕಿನ ಏಕಲವ್ಯ ವಸತಿ ಶಾಲೆ ಮತ್ತು ಕುಶಾಲನಗರದ ಬಸವನಹಳ್ಳಿ ಶಾಲೆಯನ್ನು ಕೋವಿಡ್ ಆರೈಕೆ ಕೇಂದ್ರವನ್ನಾಗಿ ಮಾಡಲು ಕಾಯ್ದಿರಿಸಲಾಗಿದೆ.

ಕೋವಿಡ್ 19 ನಿಯಂತ್ರಿಸುವ ಮತ್ತು ಎದುರಿಸುವಲ್ಲಿ ಅಗತ್ಯ ಕ್ರಮ ಕೈಗೊಂಡಿದೆ. ಆ ದಿಸೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ 11 ಟೆಂಪೋ ಟ್ರಾವೆಲರ್, 108ರ 8 ವಾಹನ, 10 ರಾಜ್ಯ ಆ್ಯಂಬುಲೆನ್ಸ್, 6 ನಗು-ಮಗು ವಾಹನ, 2 ಸಂಚಾರಿ ವೈದ್ಯಕೀಯ ಘಟಕ, ಶವಸಾಗಿಸುವ 4 ವಾಹನ, ಗಂಟಲು ಮಾದರಿ ದ್ರವ ಸಂಗ್ರಹಿಸಲು 7 ಓಮ್ನಿ ವಾಹನ, ಗಂಟಲು ಮಾದರಿ ರವಾನೆಗೆ 15 ಕಾರುಗಳು ಸಂಚಾರ ಮಾಡುತ್ತಿವೆ ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಅವರು ಮಾಹಿತಿ ನೀಡಿದ್ದಾರೆ.

ABOUT THE AUTHOR

...view details