ಕೊಡಗು:ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರೆದಿದ್ದು, ವ್ಯಾಘ್ರನ ದಾಳಿಗೆ ಹಸುವೊಂದು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ.
ಹುಲಿ ದಾಳಿಗೆ ಹಸು ಬಲಿ: ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ
ವಿರಾಜಪೇಟೆ ತಾಲೂಕಿನ ಬೆಳ್ಳೂರು ಗ್ರಾಮ ಹತ್ತಿರದ ಗೋಪಾಲ್ ಎಂಬುವವರಿಗೆ ಸೇರಿದ ಹಸು ಹುಲಿ ಬಾಯಿಗೆ ಪ್ರಾಣ ತೆತ್ತಿದ್ದು, ಗದ್ದೆಯಲ್ಲಿ ಮೇಯಲು ಬಿಟ್ಟಿದ್ದ ಸಂದರ್ಭದಲ್ಲಿ ದಾಳಿ ಮಾಡಿ ಕುತ್ತಿಗೆ ಭಾಗ ಕಡಿದು ರಕ್ತ ಹೀರಿ ಕೊಂದಿದೆ.
ಹುಲಿ ದಾಳಿಗೆ ಹಸು ಬಲಿ
ಬೆಳ್ಳೂರು ಗ್ರಾಮದ ಗೋಪಾಲ್ ಎಂಬುವವರಿಗೆ ಸೇರಿದ ಹಸುವು ಜಮೀನಿನಲ್ಲಿ ಮೇಯುತ್ತಿದ್ದ ವೇಳೆ ಹುಲಿ ಬಾಯಿಗೆ ಸಿಲುಕಿ ಮೃತಪಟ್ಟಿದೆ.
ದಕ್ಷಿಣ ಕೊಡಗು ವಿರಾಜಪೇಟೆ ವ್ಯಾಪ್ತಿಯಲ್ಲಿ ಪದೇ ಪದೆ ಹುಲಿದಾಳಿ ಪ್ರಕರಣಗಳು ನಡೆಯುತ್ತಿರುವುದರಿಂದ ಸ್ಥಳೀಯರು ಆತಂಕದಲ್ಲಿದ್ದಾರೆ. ಅಲ್ಲದೆ ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.