ಕೊಡಗು: ವಿರಾಜಪೇಟೆ ತಾಲೂಕಿನ ಅಯ್ಯಪ್ಪ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಟ್ಟದ ತಪ್ಪಲಿನಲ್ಲಿದ್ದ ಮೂರು ಕುಟುಂಬಗಳನ್ನು ಸುತಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಅಯ್ಯಪ್ಪ ಬೆಟ್ಟದಲ್ಲಿ ಬಿರುಕು: ಮೂರು ಕುಟುಂಬಗಳ ಸ್ಥಳಾಂತರ - ಅಯ್ಯಪ್ಪ ಬೆಟ್ಟದಲ್ಲಿ ಬಿರುಕು
ಎಡಬಿಡದೇ ಸುರಿಯುತ್ತಿರುವ ಮಳೆಯಿಂದ ವಿರಾಜಪೇಟೆ ತಾಲೂಕಿನ ಅಯ್ಯಪ್ಪ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸ್ಥಳೀಯರನ್ನ ನಿರಾಶ್ರಿತರ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.
ಅಯ್ಯಪ್ಪ ಬೆಟ್ಟದಲ್ಲಿ ಬಿರುಕು
ನಿನ್ನೆ ಅಯ್ಯಪ್ಪ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ವಿರಾಜಪೇಟೆ ತಹಶೀಲ್ದಾರ್ ನೇತೃತ್ವದಲ್ಲಿ ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ. ಸದ್ಯ ಮೂರು ಕುಟುಂಬದವರು ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿದ್ದಾರೆ.