ವಿರಾಜಪೇಟೆ (ಕೊಡಗು): ನಾಳೆ 2 ನೇ ಹಂತದ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಸೇಂಟ್ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ಮಸ್ಟರಿಂಗ್ ಕಾರ್ಯವನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎರಡನೇ ಹಂತದ ಪಂಚಾಯಿತಿ ಚುನಾವಣೆಗೆ ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ತಾಲೂಕಿನ ಒಟ್ಟು 38 ಗ್ರಾಮ ಪಂಚಾಯಿತಿಗಳಲ್ಲಿ 35 ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 183 ಮತಗಟ್ಟೆಗಳಲ್ಲಿ ನಾಳೆ ಬೆಳಗ್ಗೆ 7 ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. 136 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, 366 ಸ್ಥಾನಗಳಿಗೆ 924 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 54 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿವೆ.