ETV Bharat Karnataka

ಕರ್ನಾಟಕ

karnataka

ETV Bharat / state

ಮುಂಗಾರು; ವಿಕೋಪ ತಡೆಗೆ ಸಿದ್ಧರಾಗುವಂತೆ ಅಧಿಕಾರಿಗಳಿಗೆ ಕೊಡಗು ಡಿಸಿ ಸೂಚನೆ - ಕೊಡಗು ಚಾರುಲತ ಸೋಮಲ್ ಮುಂಜಾಗೃತ ಸಭೆ

ಕಳೆದ ಮೂರು ವರ್ಷಗಳಲ್ಲಿ ಆಗಸ್ಟ್ ಮೊದಲ ಮತ್ತು ಎರಡನೇ ವಾರದಲ್ಲಿ ಸುರಿದ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಸಾಕಷ್ಟು ಹಾನಿ ಉಂಟಾಗಿತ್ತು. ಆದ್ದರಿಂದ, ಪ್ರಾಕೃತಿಕ ಹಾನಿ ತಪ್ಪಿಸುವ ನಿಟ್ಟಿನಲ್ಲಿ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ವಹಿಸುವಲ್ಲಿ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಕೊಡಗು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

dc-charulata-somal-virtual-meeting-with-kodagu-district-officials
ಡಿಸಿ ಚಾರುಲತ ಸೋಮಲ್
author img

By

Published : May 14, 2021, 9:32 PM IST

ಕೊಡಗು: ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಶುಕ್ರವಾರ ಜೂಮ್ ಆ್ಯಪ್ ಮೂಲಕ ವಿಡಿಯೊ ಸಂವಾದ ಸಭೆ ನಡೆಸಿದರು.

ಮುಂಗಾರು ಮಳೆ ಅಗತ್ಯ ಸಿದ್ಧತೆಗೆ ಡಿಸಿ ಚಾರುಲತ ಸೋಮಲ್ ಸೂಚನೆ

ಹಿರಿಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ವಿಡಿಯೋ ಸಂವಾದ ನಡೆಸಿ ಹಲವು ಸೂಚನೆ ನೀಡಿದರು. ಕಳೆದ ಮೂರು ವರ್ಷಗಳಲ್ಲಿ ಆಗಸ್ಟ್ ಮೊದಲ ಮತ್ತು ಎರಡನೇ ವಾರದಲ್ಲಿ ಸುರಿದ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಸಾಕಷ್ಟು ಹಾನಿ ಉಂಟಾಗಿತ್ತು. ಆದ್ದರಿಂದ, ಪ್ರಾಕೃತಿಕ ಹಾನಿ ತಪ್ಪಿಸುವ ನಿಟ್ಟಿನಲ್ಲಿ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ವಹಿಸುವಲ್ಲಿ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ನಿರ್ದೇಶನ ನೀಡಿದರು.

ಪ್ರಮುಖವಾಗಿ ಗುಡ್ಡಕುಸಿತ ಉಂಟಾಗುವ ಪ್ರದೇಶಗಳ ಮೇಲೆ ನಿಗಾವಹಿಸಬೇಕಿದೆ. ಅಗತ್ಯವಿದ್ದಲ್ಲಿ ಸ್ಥಳೀಯ ಜನರನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸುವ ಸಂಬಂಧ ಮುಂಚಿತವಾಗಿ ಮಾಹಿತಿ ನೀಡುವಂತಾಗಬೇಕು. ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರು, ಸ್ಥಳೀಯ ನೋಡಲ್ ಅಧಿಕಾರಿಗಳ ಸಹಾಯದೊಂದಿಗೆ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕು. ಯಾವುದೇ ಘಟನೆ ಬಗ್ಗೆ ನೇರವಾಗಿ ದೂರವಾಣಿ ಮೂಲಕ ಮಾಹಿತಿ ನೀಡುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು. ಅಲ್ಲದೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸನ್ನದ್ಧವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ನಿಯೋಜಿತ ನೋಡಲ್ ಅಧಿಕಾರಿಗಳು ಮತ್ತು ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ಪರಿಸ್ಥಿತಿಯನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಸಕಲ ತಯಾರಿ ಮಾಡಿಕೊಳ್ಳುವಂತೆ ಚಾರುಲತ ಸೋಮಲ್ ಸೂಚಿಸಿದರು.

ತಹಶೀಲ್ದಾರ್ ಯೋಗಾನಂದ, ಗೋವಿಂದರಾಜು, ಪ್ರಕಾಶ್ ಅವರು ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಜಿ.ಪಂ. ಉಪ ಕಾರ್ಯದರ್ಶಿ ಲಕ್ಷ್ಮಿ, ಉಪ ವಿಭಾಗಾಧಿಕಾರಿ ಶ್ರೀನಿವಾಸ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಚಂದನ್, ಪೌರಾಯುಕ್ತರಾದ ರಾಮದಾಸ್, ಲೋಕೋಪಯೋಗಿ, ಜಿ.ಪಂ., ಸೆಸ್ಕ್ ಇಂಜಿನಿಯರ್​ ಉಪಸ್ಥಿತರಿದ್ದರು.

ABOUT THE AUTHOR

...view details