ಕರ್ನಾಟಕ

karnataka

ETV Bharat / state

ಯುವಕರ ಮೇಲೆ ಅಪರಿಚಿತರಿಂದ ಮಾರಣಾಂತಿಕ ಹಲ್ಲೆ.. ದೃಶ್ಯ ಸಿಸಿಟಿವಿಯಲ್ಲಿ ಸೆರೆ.. - ಕುಶಾಲನಗರ ಮುಳ್ಳುಸೋಗೆ ಯುವಕರ ಮೇಲೆ ಹಲ್ಲೆ

ಜೋರಾದ ಶಬ್ಧ ಕೇಳಿ ಮನೆಯಿಂದ ಹೊರಗೆ ಬಂದ ಎಂಜಿನಿಯರಿಂಗ್ ವರ್ಕ್ಸ್ ಮಾಲೀಕ ಸುರೇಶ್, ತಕ್ಷಣ ಪೊಲೀಸರು ಹಾಗೂ ಆ್ಯಂಬುಲೆನ್ಸ್‌ಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಇಬ್ಬರನ್ನೂ ಮೈಸೂರು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ..

deadly-attack-on-youths-in-mullusoge-village
ಯುವಕರ ಮೇಲೆ ಹಲ್ಲೆ

By

Published : Aug 2, 2021, 10:53 PM IST

ಕೊಡಗು :ಕಾರಿನಲ್ಲಿ ಬಂದ ಆಗಂತುಕರ ಗುಂಪೊಂದು ಬೈಕ್‌ ಸವಾರರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾದ ಘಟನೆ ಜಿಲ್ಲೆಯ ಕುಶಾಲನಗರದ ಸಮೀಪದ ಮುಳ್ಳುಸೋಗೆ ಗ್ರಾಮದ ಬಳಿ ನಡೆದಿದೆ.

ಮುಳ್ಳುಸೋಗೆ ನಿವಾಸಿಗಳಾದ ಸಾಗರ್ (25) ಚೇತನ್ (24) ಎಂಬುವರು ಹಲ್ಲೆಗೊಳಾದ ಯುವಕರು. ಇಬ್ಬರನ್ನು ಮೈಸೂರಿನ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಯುವಕರ ಮೇಲೆ ಅಪರಿಚಿತರಿಂದ ಮಾರಣಾಂತಿಕ ಹಲ್ಲೆ

ಘಟನೆಯ ಹಿನ್ನೆಲೆ

ಭಾನುವಾರ ಮಧ್ಯರಾತ್ರಿ 12 ಗಂಟೆಯ ಸಮಯದಲ್ಲಿ ಕುಶಾಲನಗರದಿಂದ ಮನೆಗೆ ಬೈಕ್‌ನಲ್ಲಿ‌ ಹೋಗುತ್ತಿದ್ದ ವೇಳೆ ಹಿಂದಿನಿಂದ ಕಾರಿನಲ್ಲಿ ಬಂದ ಅಪರಿಚಿತರು ಗ್ರಾಮದ ಅಂಗಡಿ ಮುಂದೆ ಬೈಕ್ ಡಿಕ್ಕಿ ಹೊಡೆದಿದ್ದಾರೆ. ಅಲ್ಲದೆ, ಬೈಕ್‌ನಿಂದ ಕೆಳಗೆ ಬಿದ್ದ ಇಬ್ಬರು ಯುವಕರ ಮೇಲೆ ವ್ಯಕ್ತಿಯೊಬ್ಬ ಕತ್ತಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ನಂತರ ಕಾರನ್ನ ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.

ಜೋರಾದ ಶಬ್ಧ ಕೇಳಿ ಮನೆಯಿಂದ ಹೊರಗೆ ಬಂದ ಎಂಜಿನಿಯರಿಂಗ್ ವರ್ಕ್ಸ್ ಮಾಲೀಕ ಸುರೇಶ್, ತಕ್ಷಣ ಪೊಲೀಸರು ಹಾಗೂ ಆ್ಯಂಬುಲೆನ್ಸ್‌ಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಇಬ್ಬರನ್ನೂ ಮೈಸೂರು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.

ಘಟನೆಗೆ ಕಾರಣವಾಯ್ತಾ ಹಳೆ ದ್ವೇಷ?

ಕಳೆದ ಕೆಲವು ದಿನಗಳ ಹಿಂದೆ ಸಾಗರ್‌ನಿಂದ ಚಾಕು ಇರಿತಕ್ಕೊಳಗಾಗಿದ್ದ ಯುವಕ ಹಾಗೂ ಆತನ ಸ್ನೇಹಿತರು ಸೇರಿ ಸಂಚು ರೂಪಿಸಿ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಪೊಲೀಸರು ಪ್ರತ್ಯೇಕ ತಂಡ ರಚಿಸಿ ಬಲೆ ಬೀಸಿದ್ದಾರೆ. ಕುಶಾಲನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details