ಮಡಿಕೇರಿ: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಳ್ಳೇಕೆರೆಯಲ್ಲಿ ನಡೆದಿದೆ.
ಹೊಟ್ಟೆ ನೋವು ಹಿನ್ನೆಲೆ ಡೆತ್ ನೋಟ್ ಬರೆದಿಟ್ಟು ಯುವತಿ ಸಾವು - madikerei abdominal pain girl dead
ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಳ್ಳೇಕೆರೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
ಯುವತಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಸಿದ್ದಾಪುರದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ರಂಜಿತಾ ಸಾವಿಗೂ ಮುನ್ನಾ ಡೆತ್ ನೋಟ್ ಬರೆದಿಟ್ಟಿದ್ದಾಳೆ. ನನ್ನಿಂದಾಗಿ ಮನೆಯಲ್ಲಿ ಎಲ್ಲರಿಗೂ ಸಮಸ್ಯೆ ಆಗುತ್ತಿದೆ. ಹೀಗಾಗಿ ನಾನು ಸಾಯುತ್ತಿದ್ದು, ನನ್ನ ಸಾವಿಗೆ ಯಾರೂ ಕಾರಣ ಅಲ್ಲ. ಅಪ್ಪ ಅಮ್ಮ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನನ್ನ ಎಲ್ಲ ಸ್ನೇಹಿತರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಕರಣ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.