ಕೊಡಗು/ಸೋಮವಾರಪೇಟೆ: ವ್ಯಕ್ತಿಯ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಸೋಮವಾರಪೇಟೆ ತಾಲೂಕಿನ ಸಿಗೇಹೊಸುರು ಗ್ರಾಮದಲ್ಲಿ ನಡೆದಿದೆ.
ಕೊಳೆತ ಸ್ಥಿತಿಯಲ್ಲಿ ಪತಿಯ ಮೃತದೇಹ ಪತ್ತೆ: ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ ಪತ್ನಿ - ಮೃತ ದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆ
ಸೋಮವಾರಪೇಟೆಯ ಗ್ರಾಮವೊಂದರಲ್ಲಿ ವ್ಯಕ್ತಿಯ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಕುರಿತು ಪತ್ನಿ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದಾಳೆ.
ಮೃತದೇಹ
ಸೀಗೆಹೊಸೂರು ಗ್ರಾಮದ ನಿವಾಸಿ ಜಗದೀಶ್ (43) ಮೃತಪಟ್ಟಿರುವ ವ್ಯಕ್ತಿ ಎನ್ನಲಾಗಿದೆ. ಈತನ ಶವ ಕೊಳೆತ ಸ್ಥಿತಿಯಲ್ಲಿ ಅವರ ವಾಸದ ಮನೆಯಲ್ಲಿ ಪತ್ತೆಯಾಗಿದೆ. ಎಂಟು ದಿನಗಳ ಹಿಂದೆ ಈತ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ದುರ್ವಾಸನೆಯಿಂದ ಎಚ್ಚೆತ್ತ ಸ್ಥಳೀಯರು ಊರಿಗೆ ಹೋಗಿದ್ದ ಆತನ ಪತ್ನಿಗೆ ವಿಷಯ ತಿಳಿಸಿದ್ದಾರೆ. ಪತ್ನಿ ಆಶಾ ಕುಶಾಲನಗರ ಗ್ರಾಮಾಂತರ ಪತಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಘಟನಾ ಸ್ಥಳಕ್ಕೆ ಸಬ್ ಇನ್ಸ್ಪೆಕ್ಟರ್ ನಂದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.