ಕರ್ನಾಟಕ

karnataka

ETV Bharat / state

ಕಾಫಿತೋಟದಲ್ಲಿ ಹುಲಿಯ ಮೃತದೇಹ ಪತ್ತೆ : ಅರಣ್ಯಾಧಿಕಾರಿಗಳ ಭೇಟಿ, ಪರಿಶೀಲನೆ - forest officials visit and inspected the spot

ದಕ್ಷಿಣ ಕೊಡಗಿನ ಬಿಟ್ಟಂಗಾಲ ಸಮೀಪದ 2ನೇ ರುದ್ರಗುಪ್ಪೆಯಲ್ಲಿನ ಕಾಫಿ ತೋಟವೊಂದರಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲಿಸಿದ್ದಾರೆ..

Detection of tiger carcass in a coffee plantation
ಕಾಫಿತೋಟದಲ್ಲಿ ಹುಲಿಯ ಮೃತದೇಹ ಪತ್ತೆ

By

Published : Jun 29, 2022, 4:58 PM IST

ಕೊಡಗು :ಕಾಫಿತೋಟದಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದ್ದು, ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದಕ್ಷಿಣ ಕೊಡಗಿನ ಬಿಟ್ಟಂಗಾಲ ಸಮೀಪದ 2ನೇ ರುದ್ರಗುಪ್ಪೆಯಲ್ಲಿನ ಕಾಫಿ ತೋಟವೊಂದರಲ್ಲಿ ಹುಲಿ ಮೃತದೇಹ ಪತ್ತೆಯಾಗಿದೆ. ಎರಡು ದಿನಗಳ ಹಿಂದೆಯೇ ಈ ಹುಲಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಕಾಫಿತೋಟದಲ್ಲಿ ಹುಲಿಯ ಮೃತದೇಹ ಪತ್ತೆ..

ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಈ ಭಾಗದಲ್ಲಿ ಹುಲಿಯೊಂದು ಸಂಚರಿಸುತ್ತಾ ಗ್ರಾಮಸ್ಥರಲ್ಲಿ ಭೀತಿ ಮೂಡಿಸಿತ್ತು. 2ನೇ ರುದ್ರಗುಪ್ಪೆಯ ಸಮೀಪವಿರುವ ಕಂಡಂಗಾಲದಲ್ಲಿ ಕರಿಮೆಣಸು ಕೊಯ್ಯುತ್ತಿದ್ದ ಕಾರ್ಮಿಕರೊಬ್ಬರ ಮೇಲೆ ದಾಳಿ ನಡೆಸಿ ಸ್ಥಳದಲ್ಲೇ ಅವರನ್ನು ದಾರುಣವಾಗಿ ಕೊಂದು ಹಾಕಿತ್ತು.

ಹುಲಿಯ ಅಂತ್ಯಕ್ರಿಯೆ ನಡೆಸಿದ ಅರಣ್ಯಾಧಿಕಾರಿಗಳು

ಇದಲ್ಲದೆ ಸುತ್ತಮುತ್ತಲಿನ ಜಾನುವಾರುಗಳ ಮೇಲೆಯೂ ನಿರಂತರವಾಗಿ ದಾಳಿ ನಡೆಸುತ್ತಿತ್ತು. ಈ ಭಾಗದಲ್ಲಿ ಆಗಿಂದಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಹುಲಿಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಗ್ರಾಮದಲ್ಲಿ ಬೀಡು ಬಿಟ್ಟು, ನಿರಂತರವಾಗಿ ಕಾರ್ಯಾಚರಣೆ ನಡೆಸಿದ್ರೂ, ಹುಲಿ ಸೆರೆ ಹಿಡಿಯಲು ಸಾಧ್ಯವಾಗಿರಲಿಲ್ಲ. ಈಗ ಹುಲಿ ಅನುಮಾನಾಸ್ಪದವಾಗಿ ಸತ್ತಿದ್ದು, ತೋಟದಲ್ಲಿ ಪತ್ತೆಯಾಗಿದೆ.

ಇದನ್ನೂ ಓದಿ:ಕೊಡಗು : ಜಿಲ್ಲೆಯಲ್ಲಿ 3ನೇ ಬಾರಿ ಕಂಪಿಸಿದ ಭೂಮಿ.. ಬೆಟ್ಟ-ಗುಡ್ಡದಲ್ಲಿ ವಾಸಮಾಡುವ ಜನರಲ್ಲಿ ಆತಂಕ

ABOUT THE AUTHOR

...view details