ಕೊಡಗು :ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದು ಖಚಿತ ಈ ಬಗ್ಗೆ ವಿದ್ಯಾರ್ಥಿಗಳಿಗೆ ಯಾವುದೇ ಆತಂಕ ಬೇಡ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದು ಖಚಿತ ಅಂತಾರೆ ಸಚಿವ ಬಿ ಶ್ರೀರಾಮುಲು - ಥರ್ಮಲ್ ಸ್ಕ್ರೀನಿಂಗ್
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ಹಾಸ್ಟೆಲ್ ವ್ಯವಸ್ಥೆ ಮಾಡಲಾಗುವುದು. ರಾಜ್ಯದಲ್ಲಿ ಶಾಲೆ ಆರಂಭಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದಕ್ಕಾಗಿ ತಜ್ಞರ ಸಮಿತಿ ರಚಿಸಲಾಗಿದೆ. ಶಾಲೆ ಆರಂಭಿಸಿದರೆ ಆಗುವ ಸಾಧಕ ಬಾಧಕ ಚರ್ಚಿಸಲಾಗುತ್ತಿದೆ.

ನಗರದಲ್ಲಿ ಮಾತನಾಡಿದ ಅವರು, ಪರೀಕ್ಷಾ ಅವಧಿಗಿಂತ ಒಂದು ಗಂಟೆ ಮುಂಚಿತವಾಗಿ ವಿದ್ಯಾರ್ಥಿಗಳು ಕೇಂದ್ರಕ್ಕೆ ಬರಬೇಕು. ಬಳಿಕ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು. ಅಲ್ಲಿಯೇ ಸ್ಯಾನಿಟೈಸರ್ ಕೂಡ ಮಾಡಲಾಗುತ್ತೆ. ವಿದ್ಯಾರ್ಥಿಗಳಿಗೆ ಯಾವುದೇ ಆತಂಕವಿಲ್ಲದಂತೆ ಪರೀಕ್ಷೆ ಮಾಡಲಾಗುವುದು ಎಂದು ಅಭಯ ನೀಡಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ಹಾಸ್ಟೆಲ್ ವ್ಯವಸ್ಥೆ ಮಾಡಲಾಗುವುದು. ರಾಜ್ಯದಲ್ಲಿ ಶಾಲೆ ಆರಂಭಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದಕ್ಕಾಗಿ ತಜ್ಞರ ಸಮಿತಿ ರಚಿಸಲಾಗಿದೆ. ಶಾಲೆ ಆರಂಭಿಸಿದರೆ ಆಗುವ ಸಾಧಕ ಬಾಧಕ ಚರ್ಚಿಸಲಾಗುತ್ತಿದೆ. ಕೇಂದ್ರದ ಮಾರ್ಗಸೂಚಿಗಳನ್ನು ಅನುಸರಿಸಲಾಗುವುದು. ಅದರ ಆಧಾರದಲ್ಲಿ ಮುಂದಿನ ದಿನಗಳಲ್ಲಿ ಶಾಲೆಗಳನ್ನ ತೆರೆಯುವ ಚಿಂತನೆ ನಡೆಸಲಾಗುವುದು ಎಂದರು.