ಕರ್ನಾಟಕ

karnataka

ETV Bharat / state

ಕೊಡಗಿನಲ್ಲಿ ಭಾರೀ ಮಳೆ ಸಾಧ್ಯತೆ.. ಆರೆಂಜ್ ಅಲರ್ಟ್ ಘೋಷಣೆ - kodagu news

ಕೊಡಗು ಜಿಲ್ಲೆಯಲ್ಲಿ ಮುಂಗಾರು ಚುರುಕಾಗಿದ್ದು, ಹವಾಮಾನ ಇಲಾಖೆಯ‌ ಮುನ್ಸೂಚನೆ ಮೇರೆಗೆ ಜಿಲ್ಲಾಡಳಿತ ಆರೆಂಜ್​ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದೆ.

District Administration announced by Orange Alert in Kodagu
ಕೊಡಗಿನಲ್ಲಿ ಭಾರೀ ಮಳೆ ಸಾಧ್ಯತೆ..ಆರೇಂಜ್ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

By

Published : Jul 16, 2020, 8:23 PM IST

ಕೊಡಗು:ಜಿಲ್ಲೆಯಲ್ಲಿ ಅಲ್ಲಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಹವಾಮಾನ ಇಲಾಖೆಯ‌ ಮುನ್ಸೂಚನೆ ಮೇರೆಗೆ ಜಿಲ್ಲಾಡಳಿತ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೊಷಿಸಿದೆ.

ಕೊಡಗಿನಲ್ಲಿ ಭಾರೀ ಮಳೆ ಸಾಧ್ಯತೆ..ಆರೇಂಜ್ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

ಜಿಲ್ಲೆಯಲ್ಲಿ ಮುಂಗಾರು ಚುರುಕಾಗಿದ್ದು, ಜಿಲ್ಲೆ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುವ ಸಂಭವಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಸಂಜೆಯಿಂದ ನಾಳೆವರೆಗೆ 115.6 ಮಿ.ಮೀಟರ್​ನಿಂದ 204.4 ಮಿ.ಮೀಟರ್ ಹಾಗೂ ನಂತರದ ದಿನಗಳಲ್ಲಿ‌ 64.5 ಮಿ.ಮೀಟರ್​ನಿಂದ 115.5 ಮಿ.ಮೀಟರ್ ಪ್ರಮಾಣದ‌ ಮಳೆ ಆಗಲಿದೆ ಎಂದು ತಿಳಿಸಿದೆ.

ಈ ಹಿನ್ನೆಲೆಯಲ್ಲಿ ‌ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಹಾಗೆಯೇ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಸಮಸ್ಯೆಗಳು ಎದುರಾದರೆ, ಜಿಲ್ಲಾಡಳಿತ ನೀಡಿರುವ ತುರ್ತು ದೂರವಾಣಿ ಸಂಖ್ಯೆ 08272-221077 ಸಂಪರ್ಕಿಸಲು ಜಿಲ್ಲಾಧಿಕಾರಿ ಅನೀಸ್ ಕೆ. ಜಾಯ್ ಮನವಿ ಮಾಡಿದ್ದಾರೆ.

ABOUT THE AUTHOR

...view details