ಕೊಡಗು : ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ರಾಷ್ಟ್ರೀಯ ಹೆದ್ದಾರಿ 275 ಬಳಿ ಶುಕ್ರವಾರ ನಿಂತಿದ್ದ ಕಾರಿನೊಳಗೆ ಅನುಮಾನಾಸ್ಪದ ರೀತಿಯಲ್ಲಿ ವೈದ್ಯರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ಸತೀಶ್ (47) ಎಂದು ಗುರುತಿಸಲಾಗಿದೆ. ಇವರು ಮೈಸೂರಿನ ಕೊಣಸೂರು ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ವೈದ್ಯರಾಗಿ ಡಾ. ಸತೀಶ್ ಕಾರ್ಯನಿರ್ವಹಿಸುತ್ತಿದ್ದರು.
ಕುಶಾಲನಗರ ಬಳಿ ಕಾರಿನೊಳಗೆ ಅನುಮಾನಾಸ್ಪದ ರೀತಿಯಲ್ಲಿ ವೈದ್ಯನ ಶವ ಪತ್ತೆ - ETV Bharat Kannada News
ಕಾರಿನೊಳಗೆ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವ ವೈದ್ಯನ ಮೃತದೇಹ ಕಂಡುಬಂದಿರುವ ಕುರಿತಂತೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ.
Published : Dec 1, 2023, 10:04 PM IST
|Updated : Dec 2, 2023, 8:56 AM IST
ಕೆಲವು ದಿನಗಳಿಂದ ರಸ್ತೆ ಪಕ್ಕದಲ್ಲಿ ಕಾರು ನಿಂತಿತ್ತು. ರಸ್ತೆಯಲ್ಲಿ ಓಡಾಡುವ ಜನರು ಅನುಮಾನಗೊಂಡು ಕಾರಿನ ಬಗ್ಗೆ ಪೋಲಿಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಕಾರನ್ನು ಪರಿಶೀಲಿಸಿದಾಗ ಶವ ಪತ್ತೆಯಾಗಿದೆ. ಸಾವಿಗೆ ನಿಖರ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರ ತನಿಖೆಯ ಬಳಿಕವಷ್ಟೇ ಮಾಹಿತಿ ಗೊತ್ತಾಗಲಿದೆ. ಕುಶಾಲನಗರ ಗ್ರಾಮಾಂತರ ಪೊಲೀಸರು ದೂರು ದಾಖಲು ಮಾಡಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ :ಹಸುಗೂಸು ಮಾರಾಟ ಪ್ರಕರಣ: 6 ವರ್ಷದಲ್ಲಿ 250ಕ್ಕೂ ಹೆಚ್ಚು ಮಕ್ಕಳು ಬಿಕರಿ, ಸಿಸಿಬಿ ವಿಚಾರಣೆ ವೇಳೆ ಬೆಳಕಿಗೆ