ಕರ್ನಾಟಕ

karnataka

By

Published : Sep 28, 2020, 7:50 PM IST

ETV Bharat / state

ಬಂದ್​ ಕೊಡಗಿನಲ್ಲಿ ನೀರಸ, ರಸ್ತೆತಡೆ ನಡೆಸಿದ ಪ್ರತಿಭಟನಾಕಾರರ ಬಂಧನ

ಜಿಲ್ಲೆಯಲ್ಲಿ ಎಂದಿನಂತೆ ಅಂಗಡಿ-ಮುಂಗಟ್ಟುಗಳು ತೆರೆದಿದ್ದವು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳು ಸೇರಿ ಆಟೋ, ಟ್ಯಾಕ್ಸಿಗಳು ಎಂದಿನಂತೆ ಸಂಚರಿಸುತ್ತಿದ್ದವು..

dull response to Karnataka bandh  in Kodagu
ಕರ್ನಾಟಕ ಬಂದ್​ಗೆ ಕೊಡಗಿನಲ್ಲಿ ನೀರಸ ಪ್ರತಿಕ್ರಿಯೆ: ರಸ್ತೆತಡೆ ನಡೆಸಿದ ಪ್ರತಿಭಟನಾಕಾರರ ಬಂಧನ

ಕೊಡಗು :ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ಮತ್ತು ಕಾರ್ಮಿಕ ನೀತಿಗಳನ್ನು ಖಂಡಿಸಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕರ್ನಾಟಕ ಬಂದ್​ಗೆ ಕೊಡಗಿನಲ್ಲಿ ನೀರಸ ಪ್ರತಿಕ್ರಿಯೆ

ಜಿಲ್ಲೆಯಲ್ಲಿ ಎಂದಿನಂತೆ ಅಂಗಡಿ-ಮುಂಗಟ್ಟುಗಳು ತೆರೆದಿದ್ದವು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳು ಸೇರಿ ಆಟೋ, ಟ್ಯಾಕ್ಸಿಗಳು ಎಂದಿನಂತೆ ಸಂಚರಿಸುತ್ತಿದ್ದವು. ಸೋಮವಾರಪೇಟೆ ತಾಲೂಕಿನ ಕುಶಾಲನಗರದ ಕೊಪ್ಪ ಗೇಟ್‌ಗೆ ಬೀಗ ಜಡಿದು ರಸ್ತೆತಡೆ ನಡೆಸಲು ಯತ್ನಿಸಿದ್ದು, ಪ್ರತಿಭಟನಾಕಾರರನ್ನು ಕುಶಾಲನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಡಿಕೇರಿಯಲ್ಲಿ ಕೂಡ ರಸ್ತೆ ತಡೆ ಮಾಡಲು ಪ್ರಯತ್ನಸಿದ ಕಾಂಗ್ರೆಸ್, ಜೆಡಿಎಸ್ಎಸ್ ಹಾಗೂ ಎಸ್‌ಡಿಪಿಐ ಕಾರ್ಯಕರ್ತರನ್ನು ಕೂಡ ಪೊಲೀಸರು ಬಂಧಿಸಿದರು. ಮಡಿಕೇರಿ, ಗೋಣಿಕೊಪ್ಪ ಕುಶಾಲನಗರ, ಸುಂಟಿಕೊಪ್ಪ, ಸೋಮವಾರಪೇಟೆ, ವಿರಾಜಪೇಟೆಯಲ್ಲಿ ಬಂದ್ ಬಿಸಿ ತಟ್ಟಲಿಲ್ಲ. ಮಡಿಕೇರಿ, ಕುಶಾಲನಗರ, ಹಾಸನ, ಮೈಸೂರು ಕಡೆಗೆ ಸಾರಿಗೆ ಬಸ್‌ಗಳು ಎಂದಿನಂತೆ ಸಂಚರಿಸಿದವು.

ABOUT THE AUTHOR

...view details