ಕೊಡಗು: ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದ್ದ ರಾಯ್ ಡಿಸೋಜಾ ಅವರ ಸಾವಿನ ಪ್ರಕರಣ ಸಂಬಂಧ ದಕ್ಷಿಣ ವಲಯ ಐಜಿಪಿ ಪ್ರವೀಣ್ ಪವಾರ್ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಮೇಲ್ನೋಟಕ್ಕೆ ತಪ್ಪಿತಸ್ಥರೆಂದು ಕಂಡು ಬಂದ ಎಂಟು ಪೊಲೀಸರನ್ನು ಸ್ಥಳದಲ್ಲೇ ಅಮಾನತು ಮಾಡಿದ್ದಾರೆ. ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದು ಎಂದು ಐಜಿಪಿ ಪ್ರವೀಣ್ ಮಧುಕರ್ ಪವಾರ್ ತಿಳಿಸಿದ್ದಾರೆ. ಶನಿವಾರ ಘಟನೆ ನಡೆದ ಸ್ಥಳ ಹಾಗೂ ಪೊಲೀಸ್ ಠಾಣೆಗೆ ಅವರು ಭೇಟಿ ನೀಡಿ ಪರಿಶೀಲಿಸಿದರು.
ಪೊಲೀಸರ ಹಲ್ಲೆಯಿಂದ ರಾಯ್ ಡಿಸೋಜಾ ಮೃತ ಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಈ ಸಂಬಂಧ ಅವರ ಸಹೋದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಲ್ಲಿಸಿದ್ದು, ದೂರು ಸ್ವೀಕರಿಸಿ, ಠಾಣೆಯ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಾಥಮಿಕ ತನಿಖೆ ನಡೆಸಿದ ವಿರಾಜಪೇಟೆ ಡಿವೈಎಸ್ಪಿ ಜಯ ಕುಮಾರ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನೀಡಿದ ವರದಿಯ ಆಧಾರದ ಮೇಲೆ 8 ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.