ಕೊಡಗು:ವಿರಾಜಪೇಟೆ ತಾಲೂಕಿನ ಕಾಯಿಮಾನಿ ಬಳಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದಾಗ ಏಕಾಏಕಿ ಆನೆ ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗ್ರಾಮದ ನಿವಾಸಿ ಜಯ ಆನೆದಾಳಿಗೊಳಗಾದವರು. ಆನೆ ದಾಳಿ ಪರಿಣಾಮ ಮಹಿಳೆಯ ಕಾಲು ಮುರಿದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕೇರಳದ ಮಾನಂದವಾಡಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಡಗಿನಲ್ಲಿ ಆನೆ ದಾಳಿ ಪ್ರಕರಣ: ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯ.! - ವಿರಾಜಪೇಟೆ
ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ಮುಂದುವರೆದಿದ್ದು ಕೆಲಸಕ್ಕೆ ತೆರಳುತ್ತಿದ್ದ ಇಬ್ಬರು ಕೂಲಿ ಕಾರ್ಮಿಕರ ಮೇಲೆ ಕಾಡಾನೆ ದಾಳಿ ಮಾಡಿರುವ ಪ್ರತ್ಯೇಕ ಘಟನೆಗಳು ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲೂಕಿನ ಬಳಿ ನಡೆದಿವೆ.
ಕೊಡಗಿನಲ್ಲಿ ಆನೆ ದಾಳಿ ಪ್ರಕರಣ: ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯ.!
ಹಾಗೆಯೇ ಸೋಮವಾರಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ಸಮೀಪದ ಹಂಚಿತಿಟ್ಟು ಹಾಡಿಯ ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳಿದ್ದ ಕಾರ್ಮಿಕ ರಾಮು (40) ಎಂಬುವರ ಮೇಲೂ ರಾತ್ರಿ ಕಾಡಾನೆ ದಾಳಿ ಮಾಡಿದ ಪರಿಣಾಮ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಬಿದ್ದಿದ್ದ ಕಾರ್ಮಿಕನನ್ನು ಮುಂಜಾನೆ ಸಿದ್ದಾಪುರ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮಡಿಕೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.