ಕೊಡಗು:ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮದ ಬಳಿ ನಡೆದಿದೆ.
ರಸ್ತೆಯಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ.. - ಕೊಡಗಿನಲ್ಲಿ ನಿವೃತ್ತ ಸೈನಿಕನ ಮೇಲೆ ಆನೆ ದಾಳಿ
ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮದ ಬಳಿ ನಡೆದಿದೆ.
ವ್ಯಕ್ತಿ ಮೇಲೆ ಕಾಡಾನೆ ದಾಳಿ
ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮದ ನಿವೃತ್ತ ಸೈನಿಕ ಮಾಚಿಮಾಡ ಶ್ಯಾಂ(65) ಕಾಡಾನೆ ದಾಳಿಗೆ ಸಿಕ್ಕಿ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ಕಾಲಿನ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.