ಮಡಿಕೇರಿ: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ನಿಲ್ಲುತ್ತಿಲ್ಲ. ಬೈಕ್‌ನಲ್ಲಿ ತೆರಳುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆಗಳು ದಾಳಿ ಮಾಡಿರುವ ಘಟನೆ ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದಲ್ಲಿ ನಡೆದಿದೆ.
ಕೊಡಗಿನಲ್ಲಿ ಕಾಡಾನೆ ದಾಳಿಯಿಂದ ಕಾರ್ಮಿಕನಿಗೆ ಗಂಭೀರ ಗಾಯ - ಕೊಡಗಿನಲ್ಲಿ ಕಾಡಾನೆ ದಾಳಿ
ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಗುಹ್ಯ ಗ್ರಾಮದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆಗಳು ದಾಳಿ ನಡೆಸಿರುವ ಘಟನೆ ನಡೆದಿದೆ.

Elephant attacked a man in Kodagu
ಕೊಡಗಿನಲ್ಲಿ ಕಾಡಾನೆ ದಾಳಿyಇಂದ ಕಾರ್ಮಿಕನಿಗೆ ಗಂಭೀರ ಗಾಯ
ಚೆನ್ನಯ್ಯನಕೋಟೆ ನಿವಾಸಿ ಸುನೀಲ್ ಕಾಡಾನೆ ದಾಳಿಯಿಂದ ಗಾಯಗೊಂಡಿರುವ ಕಾರ್ಮಿಕ. ಗುಹ್ಯ ಶಾಲೆಯ ಬಳಿ ಇದ್ದ ಮೂರು ಕಾಡಾನೆಗಳು ಕಾರ್ಮಿಕನ ಮೇಲೆ ಏಕಾಏಕಿ ದಾಳಿ ನಡೆಸಿದ್ದು, ಸುನೀಲ್ ಕಾಲು ಹಾಗೂ ಬೆನ್ನಿನ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಸಿದ್ದಾಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಗ್ರಾಮದಲ್ಲೆ ಬೀಡುಬಿಟ್ಟಿರುವ ಕಾಡಾನೆ ಹಿಂಡನ್ನು ಕಾಡಿಗಟ್ಟುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.