ಸೋಮವಾರಪೇಟೆ/ಕೊಡಗು: ಸಾಲಬಾಧೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರಪೇಟೆ ತಾಲೂಕಿನ ನಿಲುವಾಗಿಲು ಗ್ರಾಮದಲ್ಲಿ ನಡೆದಿದೆ.
ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ - Farmer committed suicide
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ಸಾಲಬಾಧೆ ತಾಳಲಾರದೆ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
![ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ Farmer suicide](https://etvbharatimages.akamaized.net/etvbharat/prod-images/768-512-01:10:05:1595490005-kn-kdg-01-23-20-suicide-av-23072020130101-2307f-00875-305.jpg)
Farmer suicide
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನಿಲುವಾಗಿಲು ಗ್ರಾಮದ ನಾಗಣ್ಣ (58) ಆತ್ಮಹತ್ಯೆಗೆ ಶರಣಾಗಿರುವ ರೈತ. ಇವರು ಬೆಸೂರು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 80 ಸಾವಿರ ಹಾಗೂ ಹಲವು ಖಾಸಗಿಯಾಗಿ 3 ಲಕ್ಷ ಕೈ ಸಾಲ ಮಾಡಿಕೊಂಡಿದ್ದರು. ಅಲ್ಲದೆ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಬೆಳೆ ನಷ್ಟದಿಂದ ಮನನೊಂದು ನಾಗಣ್ಣ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಸೋಮವಾರಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.