ಕೊಡಗು:ನೆರೆ ನಿರಾಶ್ರಿತ ರೈತರಿಗೆ ನ್ಯಾಯ ಒದಗಿಸುವುದು, ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಸೇರಿ ಹಲವು ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿತ್ತು.
ತಲಕಾವೇರಿಯಿಂದ ಬೆಂಗಳೂರಿನವರೆಗೆ ರೈತ ಸಂಘದಿಂದ ಜಾಥಾ...! - ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರ ಜಾಥಾ
ರೈತ ಸಂಘದ ಜಿಲ್ಲಾಧ್ಯಕ್ಷ ಮನುಸೋಮಯ್ಯ ನೇತೃತ್ವದಲ್ಲಿ ನೂರಾರು ರೈತರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ತಲಕಾವೇರಿಯಿಂದ ಬೆಂಗಳೂರಿನವರೆಗೂ ಜಾಥಾ ನಡೆಸಿದರು.
Farmers made bike rally
ರೈತ ಸಂಘದ ಜಿಲ್ಲಾಧ್ಯಕ್ಷ ಮನುಸೋಮಯ್ಯ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಜಾಥಾಗೆ ತಾಯಿ ಕಾವೇರಿಗೆ ಪೂಜೆ ಸಲ್ಲಿಸುವ ಮೂಲಕ ಆರಂಭಿಸಲಾಯಿತು. ತಲಕಾವೇರಿಯಿಂದ ಬೆಂಗಳೂರಿನವರೆಗೆ ಈ ಜಾಥಾ ಹಮ್ಮಿಕೊಂಡಿದ್ದು, ರಾಜ್ಯ ಸರ್ಕಾರದಿಂದ ನೆರೆ ಸಂತ್ರಸ್ತ ರೈತರಿಗಾಗಿರುವ ಅನ್ಯಾಯವನ್ನು ಖಂಡಿಸಿ ಜಾಥಾ ಆರಂಭಸಿದ್ದಾರೆ. ಸರ್ಕಾರ ರೈತರಿಗೆ ವಿಶೇಷ ಪ್ಯಾಕೇಜ್, ರೈತರ ಸಂಪೂರ್ಣ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ರೈತರು ಆಗ್ರಹಿಸಿದರು. ಜಾಥಾದಲ್ಲಿ ನೂರಾರು ರೈತರು ಭಾಗಿಯಾಗಿದ್ದರು.