ಸಿದ್ದರಾಮಯ್ಯ ವಿರುದ್ಧ ಮಡಿಕೇರಿಯಲ್ಲಿ ಎಫ್ಐಆರ್
14:29 January 08
ಸಿದ್ದರಾಮಯ್ಯ ವಿರುದ್ಧ ಎಫ್ಐಆರ್
ಕೊಡಗು: ಕೊಡವರು ಗೋಮಾಂಸ ತಿನ್ನುತ್ತಾರೆಂಬ ಹೇಳಿಕೆ ವಿಚಾರವಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಶ್ಚಿಮ ಘಟ್ಟ ಸಂರಕ್ಷಣಾ ಸಮಿತಿ ಅಧ್ಯಕ್ಷ ರವಿ ಕುಶಾಲಪ್ಪ ದೂರು ನೀಡಿದ್ದಾರೆ. ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ಮುಂದುವರೆಸುವುದಾಗಿ ಹಾಗೂ ಬಹಿರಂಗ ಕ್ಷಮೆ ಕೇಳಿದರೂ ನಾವು ಕ್ಷಮಿಸಲ್ಲ ಎಂದು ಹೇಳಿದರು.
ಕೊಡವರ ಭಾವನೆಗೆ ಧಕ್ಕೆಯಾಗಿದೆ ಎಂಬ ದೂರು ಆಧರಿಸಿ, ಐಪಿಸಿ ಸೆಕ್ಷನ್ 153 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.