ಕೊಡಗು (ವಿರಾಜಪೇಟೆ):ಆಕಸ್ಮಿಕ ಬೆಂಕಿ ಅವಘಡಕ್ಕೆ ಎರಡು ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ವಿರಾಜಪೇಟೆ ಪಟ್ಟಣದಲ್ಲಿ ರಾತ್ರಿ ನಡೆದಿದೆ.
ಅಂಗಡಿಗಳಿಗೆ ಆಕಸ್ಮಿಕ ಬೆಂಕಿ.... ಲಕ್ಷಾಂತರ ಮೌಲ್ಯದ ವಸ್ತುಗಳು ನಾಶ..! - fire
ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ವಿರಾಜಪೇಟೆಯ ಮೂರು ಅಂಗಡಿಗಳು ಸುಟ್ಟು ಕರಕಲಾಗಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.
Breaking News
ಪಟ್ಟಣದ ಕಾರ್ತಿಕ್ ರಾಜ್ ಮತ್ತು ಶ್ರೀನಿವಾಸ್ ಎಂಬುವವರ ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಜೊತೆಗೆ ಎಲೆಕ್ಪ್ರಿಕಲ್ ಅಂಗಡಿಗೂ ಬೆಂಕಿ ಬಿದ್ದಿದೆ. ಶ್ರೀನಿವಾಸ್ ಎಂಬುವವರ ತರಕಾರಿ ಅಂಗಡಿಯೂ ಬೆಂಕಿನ ಕೆನ್ನಾಲಿಗೆಗೆ ಸಿಲುಕಿದೆ. ಎಲೆಕ್ಟ್ರಿಕಲ್ ಅಂಗಡಿಯ ಲಕ್ಷಾಂತರ ಮೌಲ್ಯದ ವಸ್ತುಗಳು ನಾಶವಾಗಿವೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಈ ಸಂಬಂಧ ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.