ಕರ್ನಾಟಕ

karnataka

ETV Bharat / state

ಬೀದಿಗೆ ಬಿದ್ದ ಕೊಡಗಿನ ನೆರೆ ಸಂತ್ರಸ್ತರು: ಸರ್ಕಾರದ ವಿರುದ್ಧ ಹಿಡಿಶಾಪ - flood victims protest in kodagu

ಪ್ರತಿಭಟನಾ ಸ್ಥಳಕ್ಕೆ ಉಪವಿಭಾಗಾಧಿಕಾರಿ ಜವರೇಗೌಡ ಭೇಟಿ ನೀಡಿ, ನಿರಾಶ್ರಿತರ ಸಮಸ್ಯೆ ಆಲಿಸಿದ್ದಾರೆ. ಶೀಘ್ರವೇ ಸೂಕ್ತ ಕ್ರಮಕೈಗೊಳ್ಳುವಂತೆ ಸಂತ್ರಸ್ತರು ಒತ್ತಾಯಸಿದರು.

flood victims protest against state and central government in kodagu
ಸರ್ಕಾರದ ವಿರುದ್ಧ ನೆರೆ ಸಂತ್ರಸ್ತರ ಹಿಡಿಶಾಪ

By

Published : Feb 10, 2020, 7:20 PM IST

ಕೊಡಗು:ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ನೆರೆ ಸಂತ್ರಸ್ತರು ಸಿದ್ಧಾಪುರ ಗ್ರಾಮ ಪಂಚಾಯತ್‌ ಎದುರು ಅಹೋರಾತ್ರಿ ಧರಣಿ ನಡೆಸಿದ್ದಾರೆ.

ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯತ್‌ ಎದುರು ನೂರಾರು ಪ್ರತಿಭಟನಾಕಾರರು ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ನೆರೆ ಹಾವಳಿ ಸಂಭವಿಸಿ 6 ತಿಂಗಳು ಕಳೆದಿದೆ. ಜಿಲ್ಲಾಡಳಿತ ಶಾಶ್ವತ ಪರಿಹಾರ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ಸರ್ಕಾರದ ವಿರುದ್ಧ ನೆರೆ ಸಂತ್ರಸ್ತರ ಹಿಡಿಶಾಪ

ಪ್ರತಿಭಟನಾ ಸ್ಥಳಕ್ಕೆ ಉಪವಿಭಾಗಾಧಿಕಾರಿ ಜವರೇಗೌಡ ಭೇಟಿ ನೀಡಿ, ನಿರಾಶ್ರಿತರ ಸಮಸ್ಯೆ ಆಲಿಸಿದ್ದಾರೆ. ಶೀಘ್ರವೇ ಸೂಕ್ತ ಕ್ರಮಕೈಗೊಳ್ಳುವಂತೆ ಸಂತ್ರಸ್ತರು ಒತ್ತಾಯಸಿದರು.

ABOUT THE AUTHOR

...view details