ಮಡಿಕೇರಿ: ಸರ್ಕಾರ ತಮಗೆ ಶಾಶ್ವತ ನಿವೇಶನ ಒದಗಿಸಬೇಕೆಂದು ಆಗ್ರಹಿಸಿ ಗುಹ್ಯ ಹಾಗೂ ಕಕ್ಕಟ್ಟುಕಾಡು ನದಿ ತೀರದ ನಿರಾಶ್ರಿತರು ಪ್ರತಿಭಟನೆ ನಡೆಸಿದ್ದಾರೆ.
ಶಾಶ್ವತ ನಿವೇಶನಕ್ಕೆ ಆಗ್ರಹ: ಕೊಡಗಿನಲ್ಲಿ ನೆರೆ ಸಂತ್ರಸ್ತರ ಪ್ರತಿಭಟನೆ - ಕೊಡಗು
ಕೊಡಗು ಜಿಲ್ಲೆಯ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಪ್ರವಾಹ ಪೀಡಿತ ಸಂತ್ರಸ್ತರು ದಿಢೀರ್ ಪ್ರತಿಭಟನೆ ನಡೆಸಿ, ಸರ್ಕಾರದ ತಾತ್ಕಾಲಿಕ ಪರಿಹಾರ ತಿರಸ್ಕರಿಸುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಸೋಮವಾರಪೇಟೆ ತಾಲೂಕಿನ ಗುಹ್ಯ ಗ್ರಾಮದ ಬಿಜಿಎಸ್ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಪ್ರವಾಹ ಪೀಡಿತ ಸಂತ್ರಸ್ತರು ದಿಢೀರ್ ಪ್ರತಿಭಟನೆ ನಡೆಸಿದರು. ಅಲ್ಲದೆ, ಸರ್ಕಾರದ ತಾತ್ಕಾಲಿಕ ಪರಿಹಾರ ತಿರಸ್ಕರಿಸಿ ಆಕ್ರೋಶ ವ್ಯಕ್ತಪಡಿಸಿದರು.
ನಾವು ಈಗಾಗಲೇ ಪ್ರವಾಹದಿಂದ ಮನೆ-ಮಠ ಕಳೆದುಕೊಂಡು ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದೇವೆ. ಇಲ್ಲಿಯೂ ನಮಗೆ ಸೂಕ್ತ ವ್ಯವಸ್ಥೆ ಮಾಡಿರಲಿಲ್ಲ. ದಾನಿಗಳು ಉಪಹಾರ ನೀಡದಿದ್ದರೆ ನಾವು ಖಾಲಿ ಹೊಟ್ಟೆಯಲ್ಲೇ ಇರಬೇಕಿತ್ತು. ಸರ್ಕಾರ ನಮಗೆ ಶಾಶ್ವತ ಸೂರು ಒದಗಿಸದಿದ್ದರೆ ಪರಿಹಾರ ಕೇಂದ್ರದಿಂದ ತೆರಳುವುದಿಲ್ಲ ಎಂದು ಎಚ್ಚರಿಕೆ ರವಾನಿಸಿದರು.