ಕರ್ನಾಟಕ

karnataka

ETV Bharat / state

ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕಿದ್ರೆ ದೇಶಾದ್ಯಂತ ಬೃಹತ್​ ಹೋರಾಟ: ಕೊಡಗು ರೈತರ ಎಚ್ಚರಿಕೆ

ಆರ್‌ಸಿಇಪಿ ಮತ್ತು ಇತರ ಎಲ್ಲಾ ಮುಕ್ತ ಒಪ್ಪಂದಗಳಿಂದ ಕೃಷಿ ಸಂಬಂಧಿತ ವಲಯಗಳನ್ನು ಹೊರಗಿಡುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕೊಡಗು ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಆರ್‌ಸಿಇಪಿ ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಿ ಪ್ರತಿಭಟನೆ

By

Published : Oct 25, 2019, 9:17 AM IST


ಕೊಡಗು:ಆರ್‌ಸಿಇಪಿ ಮತ್ತು ಇತರ ಎಲ್ಲಾ ಮುಕ್ತ ಒಪ್ಪಂದಗಳಿಂದ ಕೃಷಿ ಸಂಬಂಧಿತ ವಲಯಗಳನ್ನು ಹೊರಗಿಡುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕೊಡಗು ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಆರ್‌ಸಿಇಪಿ ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಿ ಪ್ರತಿಭಟನೆ

ಜಿಲ್ಲಾಧಿಕಾರಿ ಭವನದ ಮುಂಭಾಗ ಜಮಾಯಿಸಿದ ರೈತರು, ಈ ಒಪ್ಪಂದವನ್ನು ಕೇಂದ್ರ ಸರ್ಕಾರ ಪುನರ್‌ ಪರಿಶೀಲಿಸಬೇಕೆಂದು ಆಗ್ರಹಿಸಿದರು. ಒಪ್ಪಂದಂತೆ ಕೃಷಿ, ತೋಟಗಾರಿಕೆ, ಹೈನುಗಾರಿಕೆ ಉತ್ಪನ್ನಗಳನ್ನು ತೆರಿಗೆ ಇಲ್ಲದೆ ಕಡಿಮೆ ಬೆಲೆಗೆ ಭಾರತಕ್ಕೆ ತರುವುದರಿಂದ ಇಲ್ಲಿನ ಕೃಷಿ, ತೋಟಗಾರಿಕೆ, ಹೈನುಗಾರಿಕೆಗೆ ಭಾರೀ ನಷ್ಟವಾಗಿ ಉದ್ಯೋಗ ಕಡಿತವಾಗುತ್ತದೆ. ಆದ್ದರಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರ ಆರ್‌ಸಿಇಪಿ ಒಪ್ಪಂದವನ್ನ ಕೈ ಬಿಡಬೇಕೆಂದು ಒತ್ತಾಯಿಸಿ, ಕೊಡಗು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

ಒಪ್ಪಂದದಿಂದ ಭಾರತ ಹಿಂದೆ ಸರಿಯದಿದ್ದಲ್ಲಿ, ದೇಶಾದ್ಯಂತ ರೈತರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಮತ್ತು ಭಾರತ ಬಂದ್‌ಗೂ ಕರೆ ನೀಡಬೇಕಾಗುತ್ತದೆ ಎಂದು ರೈತ ಮುಖಂಡರು ಎಚ್ವರಿಕೆ ನೀಡಿದ್ದಾರೆ.

ABOUT THE AUTHOR

...view details