ಕೊಡಗು:ವಯಸ್ಸಾದ ಹುಲಿಯನ್ನು ಕೊಂದು ಅದರ ಚರ್ಮವನ್ನು ಮಾರಾಟ ಮಾಡಲು ಯತ್ನಿಸಿದ ನಾಲ್ವರು ಆರೋಪಿಗಳನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಒಂದು ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಮಾಲ್ದಾರೆಯಲ್ಲಿ ನಡೆದಿದೆ.
ಹುಲಿ ಚರ್ಮ ಮಾರಾಟ ಮಾಡಲು ಯತ್ನಿಸಿದ ನಾಲ್ವರ ಬಂಧನ - ಕೊಡಗಿನಲ್ಲಿ ಹುಲಿ ಚರ್ಮ ಮಾರಾಟ ಮಾಡಲು ಯತ್ನಿಸಿದ ನಾಲ್ವರ ಬಂಧನ,
ವಯಸ್ಸಾದ ಹುಲಿಯನ್ನು ಕೊಂದು ಅದರ ಚರ್ಮ ಮಾರಾಟ ಮಾಡಲು ಯತ್ನಿಸಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಠನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಹರೀಶ್, ರಮೇಶ್, ಮನು ಹಾಗೂ ರಾಜೇಶ್ ಎಂದು ಗುರುತಿಸಲಾಗಿದೆ. ವಯಸ್ಸಾದ ಹುಲಿ ಕೊಂದು, ಅದರ ಚರ್ಮ, ಉಗುರು ಹಾಗೂ ಪಾದಗಳನ್ನು ಕತ್ತರಿಸಿ ಮಾರಾಟ ಮಾಡಲು ಯತ್ನಿಸಿದ್ದರು. ಈ ಭಾಗದಲ್ಲಿ ಹುಲಿಗಳನ್ನು ಕೊಂದು ಅದರ ಚರ್ಮ ಹಾಗೂ ಇತರ ಭಾಗಗಳನ್ನ ಕತ್ತರಿಸಿ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರು.
ಇದೀಗ ಬಂಧಿತರಿಂದ ಹುಲಿಯ ಚರ್ಮ, 7 ಉಗುರು, 2 ಕಾಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಪ್ರಕರಣ ಕುರಿತಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ವಿಚಾರಣೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.