ಮಡಿಕೇರಿ: ಮೈಸೂರಿನಿಂದ ಮಡಿಕೇರಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ, 6.70 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಸುಂಟಿಕೊಪ್ಪದ ಅಮ್ಜದ್ ಶರೀಫ್, ಸಮೀರ್, ಅಫ್ರಿದಿ ಹಾಗೂ ರವಿ ಬಂಧಿತರು.
ಗಾಂಜಾ ದಂಧೆ: ನಾಲ್ವರು ಆರೋಪಿಗಳನ್ನು ಬಂಧಿಸಿದ ಕೊಡಗು ಪೊಲೀಸರು - ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಮೈಸೂರಿನಿಂದ ಮಡಿಕೇರಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು
ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸುಮನ ಡಿ.ಪೆನ್ನೇಕರ್, ಬಸವನಹಳ್ಳಿಯಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ ನಡೆಸಿದರು. 3 ವರ್ಷಗಳಿಂದ ಆರೋಪಿಗಳು ಗಾಂಜಾ ದಂಧೆ ನಡೆಸುತ್ತಿದ್ದರು ಎಂದರು.
ಮೈಸೂರಿನ ಮಂಡಿಯಿಂದ-ಕೊಡಗಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಈ ಕುರಿತು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.