ಕೊಡಗು: ಜಿಲ್ಲೆಯ ರೈತರ ಸಾಲ ಮನ್ನಾ ಮಾಡಲು ರಾಜ್ಯ ಸರ್ಕಾರವನ್ನು ಒತ್ತಾಯಿಸುವಂತೆ ಜಿಲ್ಲಾ ಪಂಚಾಯಿತಿಯ ಕಾಂಗ್ರೆಸ್ ಸದಸ್ಯರು ಆಗ್ರಹಿಸಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರು, ಕೊಡಗಿನ ರೈತರು ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಲ ಮನ್ನಾಗೆ ಸರ್ಕಾರವನ್ನು ಒತ್ತಾಯಿಸಬೇಕು ಎಂದು ಆಗ್ರಹಿಸಿದರು.
ಕೊಡಗು ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಗದ್ದಲ - General meeting of Kodagu Zilla Panchayat
ಕೊಡಗು ಜಿಲ್ಲೆಯ ರೈತರ ಸಾಲ ಮನ್ನಾ ಮಾಡಲು ರಾಜ್ಯ ಸರ್ಕಾರವನ್ನು ಒತ್ತಾಯಿಸುವಂತೆ ಜಿಲ್ಲಾ ಪಂಚಾಯಿತಿಯ ಕಾಂಗ್ರೆಸ್ ಸದಸ್ಯರು ಆಗ್ರಹಿಸಿದ್ದಾರೆ.

ಕೊಡಗು ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಗದ್ದಲ
ಕೊಡಗು ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಗದ್ದಲ
ಈ ವೇಳೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹರೀಶ್ ಬೇರೆ ವಿಷಯದ ಚರ್ಚೆಗೆ ಮುಂದಾದಾಗ ಇದಕ್ಕೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಅಧ್ಯಕ್ಷರು ಹಾಗೂ ಸದಸ್ಯರ ನಡುವೆ ವಾಗ್ವಾದ ಏರ್ಪಟ್ಟಿತು.