ಕೊಡಗು:ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಒಟ್ಟಾಗಿ ಕಾರ್ಯ ನಿರ್ವಹಿಸಬೇಕಿದೆ. ಈ ಬಗ್ಗೆ ಸಿಎಂ ಅವರ ಗಮನಕ್ಕೆ ತರುತ್ತೇನೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಆರೋಗ್ಯ-ವೈದ್ಯಕೀಯ ಇಲಾಖೆಗಳು ಒಟ್ಟಾಗಿ ಕಾರ್ಯ ನಿರ್ವಹಿಸಬೇಕು.. ಸಚಿವ ಶ್ರೀರಾಮುಲು - Health Minister B. Sriramulu
ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಒಟ್ಟಾಗಿ ಕಾರ್ಯ ನಿರ್ವಹಿಸಬೇಕಿದೆ. ಈ ಬಗ್ಗೆ ಸಿಎಂ ಅವರ ಗಮನಕ್ಕೆ ತರುತ್ತೇನೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಜಿಲ್ಲಾಸ್ಪತ್ರೆಯ ಸ್ಥಿತಿಗತಿಗಳನ್ನು ಪರಿಶೀಲಿಸಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮೊದಲೆಲ್ಲ ವೈದ್ಯಕೀಯ ಕಾಲೇಜು ಹಾಗೂ ಆರೋಗ್ಯ ಇಲಾಖೆಗಳು ಒಟ್ಟಿಗೆ ಇದ್ದವು. ಆದರೆ, ಹಲವು ಕಾರಣಗಳಿಂದ ಅವುಗಳನ್ನು ವಿಂಗಡಣೆ ಮಾಡಿದ ಪರಿಣಾಮ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದ್ರು. ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆ ನೀಗಿಸಲು ಕ್ರಮಕೈಗೊಳ್ಳಲಾಗಿದ್ದು, ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು ಎಂದರು.
ಕೊಡಗು ಭೌಗೋಳಿಕವಾಗಿ ಗುಡ್ಡಗಾಡು ಜಿಲ್ಲೆಯಾದ್ದರಿಂದ ಮಲ್ಟಿಸ್ಪೆಷಲ್ ಆಸ್ಪತ್ರೆಯ ಅಗತ್ಯವಿದೆ. ಜಿಲ್ಲಾಸ್ಪತ್ರೆಯನ್ನು 450 ಹಾಸಿಗೆಯ ಸಾಮರ್ಥ್ಯದ ಮೇಲ್ದರ್ಜೆಗೇರಿಸಲು ಪ್ರಯತ್ನಿಸುವೆ. ರಾಜ್ಯದಲ್ಲಿರುವ ವೈದ್ಯರ ಕೊರತೆ ನೀಗಿಸಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದರು.