ಮಡಿಕೇರಿ: ಮಗಳ ಮದುವೆ ಕಾರ್ಯಕ್ರಮದ ತಯಾರಿಯಲ್ಲಿರುವುದರಿಂದ ಇಂದು ನಡೆದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮಕ್ಕೆ ತೆರಳು ಸಾಧ್ಯವಾಗಿಲ್ಲ ಎಂದು ತಮ್ಮ ಗೈರುಹಾಜರಿಗೆ ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ನಮಗೆ ಯಾವುದೇ ಅಸಮಾಧಾನವಿಲ್ಲ. ನಮ್ಮಲ್ಲಿ ಮೂಲ ಬಿಜೆಪಿಗರು ಮತ್ತು ವಲಸಿಗರು ಎನ್ನುವ ವ್ಯತ್ಯಾಸವಿಲ್ಲ. ಸರ್ಕಾರ ರಚನೆಗೂ ಮೊದಲೇ ಬೇರೆ ಪಕ್ಷಗಳಿಂದ ಶಾಸಕರು ಬರುವಾಗ ಅವರಿಗೆ ಸಚಿವಸ್ಥಾನ ನೀಡುವ ಭರವಸೆ ನೀಡಲಾಗಿತ್ತು. ಅದರಂತೆ ಈಗ ಸಚಿವ ಸಂಪುಟ ವಿಸ್ತರಣೆ ಆಗಿದೆ ಎಂದರು. ಇದೇ ವೇಳೆ ಉಪಮುಖ್ಯಮಂತ್ರಿ ಸ್ಥಾನ ಸಿಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಶ್ರೀರಾಮುಲು ಪಕ್ಷ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.