ಕೊಡಗು: ಕೇರಳದಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕೊಡಗಿನಲ್ಲೂ ಮಳೆ ಬೀಳುವ ಮುನ್ಸೂಚನೆ ನೀಡಿದ್ದು, ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಕೇರಳದಲ್ಲಿ ಮಳೆ ಹಿನ್ನೆಲೆ ಕೊಡಗಿನಲ್ಲಿ ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ
ಕೇರಳದಲ್ಲಿ ಭಾರಿ ಮಳೆಯಾಗುವ ಹಿನ್ನೆಲೆ ಕೊಡಗಿನಲ್ಲೂ ಮಳೆ ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಹಿನ್ನೆಲೆ ಜನರು ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಕೇರಳದಲ್ಲಿ ಮಳೆ ಹಿನ್ನೆಲೆ: ಕೊಡಗಿನಲ್ಲಿ ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ
ಈಗಾಗಲೇ ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಜನತೆ ಸುರಕ್ಷಿತ ಸ್ಥಳದಲ್ಲಿ ಇರಬೇಕು. ಮಳೆ ಪರಿಣಾಮ ಕೊಡಗಿನಲ್ಲಿ ಭೂ ಕುಸಿತ ಆಗುವ ಸಂಭವವಿದೆ. ಆದ್ದರಿಂದ ಜನರು ಆಗಸ್ಟ್ 15ರವರೆಗೆ ಪರಿಹಾರ ಕೇಂದ್ರಗಳಲ್ಲಿ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಪ್ರವಾಸಿಗರು ಹಾಗೂ ಜಿಲ್ಲೆಯ ಜನ ಆತಂಕ ಪಡುವ ಅಗತ್ಯವಿಲ್ಲ. ಮಳೆ ಸಂಬಂಧಿ ಏನೇ ಸಮಸ್ಯೆಗಳು ಎದುರಾದರೆ ತಕ್ಷಣವೇ ಸಹಾಯವಾಣಿ ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ತಿಳಿಸಿದ್ದಾರೆ.