ಕೊಡಗು:ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಬಿಡದೆ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ನಿನ್ನೆ ರಾತ್ರಿಯಿಂದ ತುಂತುರು ಮಳೆಯಾಗುತ್ತಿತ್ತು. ಇಂದು ಬೆಳಗ್ಗೆ ಸ್ವಲ್ಪ ವೇಗ ಪಡೆದುಕೊಂಡಿದ್ದ ಮಳೆ, ಮಧ್ಯಾಹ್ನದ ನಂತರ ಧಾರಾಕಾರವಾಗಿ ಸುರಿಯುತ್ತಿದೆ.
ಕೊಡಗಿನಲ್ಲಿ ಅಬ್ಬರಿಸುತ್ತಿದೆ ಮಳೆ: ಹೆಚ್ಚಿದ ಆತಂಕ
ಕೊಡಗು ಜಿಲ್ಲೆಯಾದ್ಯಂತ ಭರ್ಜರಿ ಮಳೆಯಾಗುತ್ತಿದ್ದು, ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.
ಕೊಡಗಿನಲ್ಲಿ ಅಬ್ಬರಿಸುತ್ತಿದೆ ಮಳೆ
ಭಾಗಮಂಡಲ, ತಲಕಾವೇರಿ, ಬ್ರಹ್ಮಗಿರಿ ತಪ್ಪಲು, ನಾಪೋಕ್ಲು ಹಾಗೂ ವಿರಾಜಪೇಟೆ ವ್ಯಾಪ್ತಿಯಲ್ಲಿ ಮಳೆಯ ಆರ್ಭಟ ತುಸು ಜೋರಾಗಿದೆ. ಜಿಲ್ಲೆಯ ಜೀವನದಿ ಕಾವೇರಿಯ ಒಳ ಹರಿವು ಹೆಚ್ಚಾಗಿದೆ. ಅಲ್ಲದೆ ಚಿಕ್ಕಪುಟ್ಟ ಹೊಳೆ, ಝರಿ, ತೊರೆಗಳು ತುಂಬಿ ಹರಿಯುತ್ತಿವೆ.
ಒಂದು ವಾರದಿಂದ ಸುರಿದ ಮಳೆಗೆ ಮಡಿಕೇರಿಯ ಆಕಾಶವಾಣಿ ಸಮೀಪ, ಇಂದಿರಾನಗರ ಮತ್ತು ಭಾಗಮಂಡಲ-ತಲಕಾವೇರಿಯ ಚೇರಂಗಾಲದ ಬಳಿ ಭೂ ಕುಸಿತ ಉಂಟಾಗಿದೆ. ಒಂದೆಡೆ ಈಗಾಗಲೇ ಕೊರೊನಾ ಪ್ರಕರಣಗಳ ನಡುವೆ ಸುರಿಯುತ್ತಿರುವ ಮಳೆ ಸ್ಥಳೀಯರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.