ಕೊಡಗು: ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ 12 ಗಂಟೆ ಬಳಿಕ ಎಡೆಬಿಡದೆ ಮಳೆ ಅಬ್ಬರಿಸುತ್ತಿದೆ. ಇನ್ನು 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗಿನಲ್ಲಿ 3 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ - ಕೊಡಗು
ಕೊಡಗಿನಲ್ಲಿ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜಿಲ್ಲೆಯಲ್ಲಿ ಎಡೆಬಿಡದೆ ಮಳೆ ಅಬ್ಬರಿಸುತ್ತಿರುವುದರಿಂದ ನದಿ, ಹಳ್ಳ, ತೊರೆ ಮತ್ತು ಝರಿಗಳಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದೆ. ಈ ನಡುವೆ ಜಿಲ್ಲೆಯ ಜನತೆ ದೈನಂದಿನ ಕೆಲಸಗಳಲ್ಲಿ ತೊಡಗಿದ್ದಾರೆ. ಬ್ರಹ್ಮಗಿರಿ, ಭಾಗಮಂಡಲ ಹಾಗೂ ತಲಕಾವೇರಿ, ವಿರಾಜಪೇಟೆ ಸೇರಿದಂತೆ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ತುಸು ಜೋರಾಗಿದೆ. ದಿನಗಳು ಕಳೆದಂತೆ ಕಾವೇರಿ ನದಿಯಲ್ಲೂ ನಿಧಾನವಾಗಿ ನೀರಿನ ಹರಿವು ಹೆಚ್ಚುತ್ತಿದೆ.
ಇತ್ತ ಸೋಮವಾರಪೇಟೆ ಭಾಗದಲ್ಲೂ ಉತ್ತಮ ಮಳೆಯಾಗುತ್ತಿರಉವುದರಿಂದ ಹಾರಂಗಿ ಜಲಾಶಯದಲ್ಲೂ ನೀರಿನ ಒಳ ಹರಿವು ಹೆಚ್ಚುತ್ತಿದೆ. ರೈತರು ಭೂಮಿಯನ್ನು ಹದಗೊಳಿಸಿಕೊಂಡು ಕೃಷಿ ಚಟುವಟಿಕೆಗೆ ಉತ್ಸಾಹದಲ್ಲಿದ್ದಾರೆ.