ಕರ್ನಾಟಕ

karnataka

ETV Bharat / state

ಕೊಡಗಿನಲ್ಲಿ ವ್ಯಾಪಕ ಮಳೆ: ರೆಡ್ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ..! - Heavy rain in Kodagu

ಕೊಡಗು ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಇಂದಿನಿಂದ ನಾಳೆ ಬೆಳಗ್ಗೆ 6 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ.

Kudagu rain
Kudagu rain

By

Published : Aug 5, 2020, 3:34 PM IST

ಕೊಡಗು:ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇಂದಿನಿಂದ ನಾಳೆ ಬೆಳಗ್ಗೆ 6 ಗಂಟೆವರೆಗೆ ರೆಡ್ ಅಲರ್ಟ್ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ವ್ಯಾಪಕವಾಗಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್​ 6 ರಿಂದ 7 ರ ಬೆಳಗ್ಗೆವರೆಗೆ ಆರೆಂಜ್ ಅಲರ್ಟ್, ಆ. 7 ರಿಂದ ಆ. 8ರ ಬೆಳಗ್ಗೆವರಗೆ ಯೆಲ್ಲೊ ಅಲರ್ಟ್ ಹಾಗೆಯೇ ಆ. 8 ರಿಂದ ಆ.10 ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶದ ಪ್ರತಿ

ಕಳೆದ ಬಾರಿಗಿಂತ ಹೆಚ್ಚು ಮಳೆ ದಾಖಲು: ಕೊಡವರಿಗೆ ಮತ್ತೆ ಕಂಟಕವಾಗುತ್ತಾ 'ಆಗಸ್ಟ್​' ತಿಂಗಳು?

ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಮೇರೆಗೆ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದೆ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜನತೆ ಎಚ್ವರಿಕೆಯಿಂದ ಇರಬೇಕು. ಒಂದು ವೇಳೆ ಪ್ರಾಕೃತಿಕ ವಿಕೋಪಗಳು ಸಂಭವಿಸಿದರೆ ಜಿಲ್ಲಾಡಳಿತದ ತುರ್ತು ದೂರವಾಣಿ ಸಂಖ್ಯೆ 08272-221077 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಅನೀಸ್.ಕೆ. ಜಾಯ್ ತಿಳಿಸಿದ್ದಾರೆ.

ABOUT THE AUTHOR

...view details