ಕರ್ನಾಟಕ

karnataka

ETV Bharat / state

ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ: ಜನರಿಗೆ ಆತಂಕ!

ಕಳೆದ 24 ಗಂಟೆಯಲ್ಲಿ ವಿರಾಜಪೇಟೆ ತಾಲೂಕಿನ ಬಿರುನಾಣಿ, ಟಿ.ಶೆಟ್ಟಿಗೇರಿ, ಶ್ರೀಮಂಗಲ, ಕುಟ್ಟ,ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಕಾವೇರಿ ನದಿ ಪಾತ್ರದದಲ್ಲಿ ನೀರಿನ‌ ಪ್ರಮಾಣದ ಏರಿಕೆಯಾಗುತ್ತಿದ್ದು, ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದಲ್ಲಿ ಆತಂಕ ಹೆಚ್ಚುತ್ತಿದೆ.

Heavy rain in Kodagu
ಕೊಡಗಿನಲ್ಲಿ ಬಿರುಸು ಪಡೆದ ಮಳೆ: ಆತಂಕದಲ್ಲಿ ಸ್ಥಳೀಯರು..!

By

Published : Jul 19, 2020, 1:02 PM IST

ಕೊಡಗು: ಜಿಲ್ಲೆಯಲ್ಲಿ ಕಳೆದ 3 ದಿನಗಳಿಂದ ಮುಂಗಾರು ಮಳೆ ಬಿರುಸುಗೊಂಡಿದೆ. ಅದರಲ್ಲಿಯೂ ಕಳೆದ 24 ಗಂಟೆಯಲ್ಲಿ ವಿರಾಜಪೇಟೆ ತಾಲೂಕಿನ ಬಿರುನಾಣಿ, ಟಿ.ಶೆಟ್ಟಿಗೇರಿ, ಶ್ರೀಮಂಗಲ, ಕುಟ್ಟ,ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ.

ಕೊಡಗಿನಲ್ಲಿ ಬಿರುಸು ಪಡೆದ ಮಳೆ: ಆತಂಕದಲ್ಲಿ ಸ್ಥಳೀಯರು..!

ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿರುನಾಣಿ ರಸ್ತೆ ನಡುವೆ ನದಿ ತುಂಬಿ ಹರಿಯುತ್ತಿದ್ದು ಗ್ರಾಮಕ್ಕೆ ಸಂಪರ್ಕ ಮಾಡುವ ಸೇತುವೆ ಮೇಲೆ 3 ಅಡಿ ಎತ್ತರ ನೀರು ಹರಿಯುತ್ತಿದೆ. ಇದರಿಂದ ಸುತ್ತ ಬ್ರಹ್ಮಗಿರಿ ಅರಣ್ಯ ಸುತ್ತುವರಿದಿದ್ದು, ಈಗ ಏಕೈಕ ರಸ್ತೆ ಮಾರ್ಗ ಕಡಿತವಾಗಿದೆ. ಕಳೆದ ವರ್ಷ ಇದೇ, ಪ್ರದೇಶಕ್ಕೆ ಸಂಪರ್ಕ ಕಲ್ಪಿಸಲು ನಿರ್ಮಿಸಿದ್ದ ಕಬ್ಬಿಣದ ತೂಗು ಸೇತುವೆ ಪ್ರವಾಹಕ್ಕೆ ಕೊಚ್ಚಿ ಹೋಗಿತ್ತು. ಈ ಪ್ರದೇಶದಲ್ಲಿ ಸುಮಾರು 12 ಕುಟುಂಬವಿದ್ದು, ಸಂಪರ್ಕ ಕಡಿತದಿಂದ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಈಗ ಇರುವ ಸೇತುವೆಯನ್ನು 10 ಅಡಿ ಎತ್ತರವಾಗಿ ನಿರ್ಮಿಸಿದರೆ ಮಳೆಗೆ ಸೇತುವೆ ಮುಳುಗುವುದನ್ನು ತಡೆಯಬಹುದು. ನಿರಂತರ ಮಳೆಯಿಂದ ಸಂಪರ್ಕ ಕಡಿತ ಹಲವು ದಿನ ಮುಂದುವರಿದರೇ, ಈ ಪ್ರದೇಶದಲ್ಲಿ ವಾಸಿಸುವ ಜನರಿಗೆ ಅಗತ್ಯ ವಸ್ತುಗಳನ್ನು ಒದಗಿಸಬೇಕೆಂದು ಗ್ರಾಮದ ನಿವಾಸಿಗಳು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ನಿರಂತವಾಗಿ ಭಾರಿ ಮಳೆಯಾಗುತ್ತಿರುವುದರಿಂದ ಈ ವ್ಯಾಪ್ತಿಯ ಕಕ್ಕಟ್ಟ ಪೊಳೆ ನದಿ ತುಂಬಿ ಹರಿಯುತ್ತಿದೆ. ಅಲ್ಲದೇ, ಲಕ್ಷ್ಮಣ ತೀರ್ಥ, ನದಿಯಲ್ಲೂ ನೀರಿನ ಮಟ್ಟ ಏರಿಕೆಯಾಗಿದೆ. ಮಡಿಕೇರಿಯಲ್ಲಿ ಕಳೆದ ರಾತ್ರಿಯಿಂದ ಮಳೆಯ ಅರ್ಭಟ ಕೊಂಚ ಕಡಿಮೆಯಾಗಿದ್ದು, ಗುಡ್ಡಗಾಡು ಪ್ರದೇಶದ ಜನರು ನಿಟ್ಟುಸಿರು ಬಿಡುವಂತಾಗಿದೆ. ಕಾವೇರಿ ನದಿ ಪಾತ್ರದದಲ್ಲಿ ನೀರಿನ‌ ಪ್ರಮಾಣದ ಏರಿಕೆ ಯಾಗುತ್ತಿದ್ದು, ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದಲ್ಲಿ ಆತಂಕ ಹೆಚ್ಚುತ್ತಿದೆ.

ABOUT THE AUTHOR

...view details