ಭಾಗಮಂಡಲ(ಕೊಡಗು): ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಉತ್ತಮವಾದ ಮಳೆಯಾಗುತ್ತಿರುವ ಪರಿಣಾಮ ಜೀವನದಿ ಕಾವೇರಿಯ ಒಳ ಹರಿವು ಹೆಚ್ಚಾಗಿದೆ.
ಕೊಡಗಿನಲ್ಲಿ ಮುಂದುವರೆದ ಮಳೆ: ತ್ರಿವೇಣಿ ಸಂಗಮದಲ್ಲಿ ಹೆಚ್ಚಿದ ನೀರಿನ ಹರಿವು
ಕೊಡಗಿನಲ್ಲಿ ಎರಡು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಕಾವೇರಿ ನದಿಯ ಉಪ ನದಿಗಳು ತುಂಬಿ ಹರಿಯುತ್ತಿವೆ.
ತ್ರಿವೇಣಿ ಸಂಗಮದಲ್ಲಿ ಹೆಚ್ಚಿದ ನೀರಿನ ಹರಿವು
ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆ ಈಗಾಗಲೇ ಜಿಲ್ಲಾಡಳಿತ ಆಗಸ್ಟ್ 7ರವರೆಗೆ ಯೆಲ್ಲೊ ಹಾಗೂ ಆರೆಂಜ್ ಅಲರ್ಟ್ ಘೋಷಿಸಿದೆ. ಮಳೆ ಹೀಗೆಯೇ ಮುಂದುವರೆದರೆ ಸದ್ಯದಲ್ಲೇ ಭಾಗಮಂಡಲ-ತಲಕಾವೇರಿ ರಸ್ತೆ ಸಂಪರ್ಕ ಸಂಪೂರ್ಣ ಬಂದ್ ಆಗುವ ಸಂಭವವಿದೆ.
ಎರಡು ದಿನಗಳಿಂದ ತಲಕಾವೇರಿ, ಬ್ರಹ್ಮಗಿರಿ ತಪ್ಪಲು, ಪುಷ್ಪಗಿರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಕಾವೇರಿಯ ಉಪ ನದಿಗಳಾದ ಕನ್ನಿಕೆ ಮತ್ತು ಸುಜ್ಯೋತಿ ಸೇರುವ ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದೆ.