ಕರ್ನಾಟಕ

karnataka

ETV Bharat / state

ಕೊಡಗಿನಲ್ಲಿ ಮತ್ತೆ ಚುರುಕುಗೊಂಡ ಮಳೆ; ಜನಜೀವನ ಅಸ್ತವ್ಯಸ್ತ

ಕೊಡಗು ಜಿಲ್ಲೆಯಲ್ಲಿ ಬೆಳಿಗ್ಗೆ ಕೊಂಚ ಬಿಡುವು ನೀಡಿದ್ದ ವರುಣ, ಮಧ್ಯಾಹ್ನದ ಬಳಿಕ ಬಿಟ್ಟುಬಿಡದೆ ಸುರಿಯುತ್ತಲೇ ಇದೆ. ಮಳೆಯ ಜೊತೆಗೆ ಭಾರಿ ಪ್ರಮಾಣದಲ್ಲಿ ಚಳಿಗಾಳಿ ಬೀಸುತ್ತಿರುವುದರಿಂದ ಜನರು ತತ್ತರಿಸಿದ್ದಾರೆ.

rain
ಮಳೆ

By

Published : Sep 12, 2020, 6:09 PM IST

ಕೊಡಗು:ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಬಿಟ್ಟುಬಿಡದೆ ಜಿಟಿಜಿಟಿ ಮಳೆ ಸುರಿಯುತ್ತಿದ್ದು ಜನರನ್ನು ಮತ್ತೆ ಆತಂಕಕ್ಕೆ ದೂಡಿದೆ.

ಕೊಡಗಿನಲ್ಲಿ ಚುರುಕುಗೊಂಡ ಮಳೆ

ಬಾಗಮಂಡಲ ಮತ್ತು ತಲಕಾವೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದರೆ, ಮಡಿಕೇರಿ, ನಾಪೋಕ್ಲು ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗುತ್ತಿದೆ. ಬೆಳಿಗ್ಗೆ ಕೊಂಚ ಬಿಡುವು ನೀಡಿದ್ದ ವರುಣ, ಮಧ್ಯಾಹ್ನದ ಬಳಿಕ ಬಿಟ್ಟುಬಿಡದೆ ಜಿಟಿಜಿಟಿ ಅಂತಾ ಸುರಿಯುತ್ತಲೇ ಇದೆ. ಮಳೆ ಜೊತೆಗೆ ಭಾರಿ ಪ್ರಮಾಣದಲ್ಲಿ ಚಳಿಗಾಳಿ ಬೀಸುತ್ತಿದ್ದು ಜನರು ತತ್ತರಿಸಿದ್ದಾರೆ.

ತಲಕಾವೇರಿ, ಬಾಗಮಂಡಲ ಸುತ್ತಮುತ್ತಲಿನ ಬೆಟ್ಟ ಪ್ರದೇಶದಲ್ಲೆಲ್ಲಾ ಭಾರಿ ಮಳೆ ಸುರಿಯುತ್ತಿದ್ದು ಕಾವೇರಿ ನದಿಯ ನೀರಿನ ಮಟ್ಟದಲ್ಲಿ ಜಾಸ್ತಿಯಾಗಿದೆ. ಬಾಗಮಂಡಲ ತ್ರಿವೇಣಿ ಸಂಗ್ರಮದಲ್ಲೂ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಒಂದು ವೇಳೆ ಮಳೆ ತೀವ್ರಗೊಂಡಲ್ಲಿ ಜಿಲ್ಲೆಯಲ್ಲಿ ಮತ್ತೆ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಇನ್ನು ಮೂರು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಗೆ ಕಾವೇರಿ ನದಿ ಪಾತ್ರದ ಜನರು ಮತ್ತು ಬೆಟ್ಟ ಪ್ರದೇಶದ ಜನರು ಆತಂಕ ಎದುರಿಸುವಂತಾಗಿದೆ.

ABOUT THE AUTHOR

...view details