ಕೊಡಗು:ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ರಾತ್ರಿಯಿಂದ ಭಾರೀ ಗಾಳಿ ಸಹಿತ ಮಳೆ ಆರಂಭವಾಗಿದೆ. ಜಿಲ್ಲೆಯಾದ್ಯಂತ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ಜನರು ಆತಂಕಗೊಂಡಿದ್ದಾರೆ.
ಹವಾಮಾನ ಇಲಾಖೆ ಜಿಲ್ಲಾಡಳಿತಕ್ಕೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುತ್ತಿರುವ ಜನ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ನೀಡುತ್ತು. ಕೆಲವು ಜನರು ಕೂಡ ಅಪಾಯದ ಸ್ಥಳಗಳನ್ನು ಬಿಟ್ಟು ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ. ಕಳೆದ ಬಾರಿ ಅನಾಹುತ ಸಂಭವಿಸಿದ ತಲಕಾವೇರಿ ಮತ್ತು ಬೆಟ್ಟಗುಡ್ಡಗಳಲ್ಲಿ, ನದಿಪಾತ್ರದಲ್ಲಿ ವಾಸ ಮಾಡುವ ಜನರಲ್ಲಿ ವರುಣಾರ್ಭಟದಿಂದ ಭೀತಿ ಹೆಚ್ಚಾಗಿದೆ.
ಕಳೆದ ಮೂರು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅವಾಂತರ ಹೆಚ್ಚಾಗಿದೆ. 2018, 2019, 2020ರಲ್ಲಿ ಮಳೆಯಿಂದ ಉಂಟಾದ ಪ್ರವಾಹದಿಂದ ಸಾಕಷ್ಟು ಅನಾಹುತಗಳು ಸಂಭವಿಸಿದ್ದು, ಹಲವರು ಪ್ರಾಣ ಕಳೆದುಕೊಂಡಿದ್ದಾರೆ.